ಶಿವಮೊಗ್ಗ: ಹಿಜಾಬ್ ಕುರಿತು ನ್ಯಾಯಾಲಯ ನೀಡಿರುವ ತೀರ್ಪಿಗೆ ಎಲ್ಲರೂ ತಲೆಬಾಗೋಣ. ಶಿಕ್ಷಣದ ಕಡೆ ಗಮನ ಹರಿಸೋಣ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.ನ್ಯಾಯಾಲಯದ ತೀರ್ಪಿನ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಕೆಲ ತಿಂಗಳಿಂದ ಹಿಜಾಬ್ ಕುರಿತು ಸಾಕಷ್ಟು ಚರ್ಚೆಗಳು ನಡೆದಿದ್ದವು.ಇದೀಗ ತೀರ್ಪು ಹೊರಬಿದ್ದಿದ್ದು, ನ್ಯಾಯಾಲಯದ ತೀರ್ಪನ್ನು ನಾವೆಲ್ಲರೂ ಸ್ವಾಗತಿಸುವ ಮೂಲಕ ಇಂದಿನಿಂದಲೇ ಶಿಕ್ಷಣದ ಕಡೆ ಗಮನಹರಿಸಬೇಕಾಗಿದೆ ಎಂದರು.
ಹಿಜಾಬ್ ವಿವಾದದಿಂದಾಗಿ ಹಲವು ವಿದ್ಯಾರ್ಥಿನಿಯರಿಗೆ ಪಾಠ, ಪ್ರವಚನಗಳು ಸಿಗದಂತಾಗಿತ್ತು. ಇಂದಿನಿಂದ ಅವರು ಶಿಕ್ಷಣದ ಕಡೆ ಹೆಚ್ಚಿನ ಗಮನ ಹರಿಸಬೇಕಾಗಿದೆ. ಧರ್ಮದ ಆಚರಣೆ ಶಾಲಾ ಕಾಲೇಜುಗಳಲ್ಲಿ ಆನ್ವಯಿಸುವುದಿಲ್ಲ ಎಂಬ ತೀರ್ಪನ್ನು ನ್ಯಾಯಾಲಯ ನೀಡಿದ್ದು, ಆಚರಣೆಯನ್ನು ಮನೆಗೆ ಸೀಮಿತಗೊಳಿಸಿ ಶಾಲಾ ಕಾಲೇಜಿನಲ್ಲಿ ಸಮವಸ್ತ್ರ ಧರಿಸುವ ಮೂಲಕ ಪ್ರತಿಯೊಬ್ಬ ವಿದ್ಯಾರ್ಥಿಗಳು ಶಿಕ್ಷಣದ ಕಡೆ ಹೆಚ್ಚಿನ ಒತ್ತು ನೀಡುವಂತಾಗಬೇಕೆಂದರು.