ಕರ್ನಾಟಕ ಅರಣ್ಯ ಇಲಾಖೆ ಮತ್ತು ಕ್ರಿಯೆಟಿವ್ ಕವರ್ಸ್ ಶಿವಮೊಗ್ಗ ಇವರ ಸಂಯುಕ್ತ ಆಶ್ರಯದಲ್ಲಿ ಇಂದು ಸಕ್ಕರೆಬೈಲು ಆನೆಬಿಡಾರ ದಲ್ಲಿ ಪ್ಲಾಸ್ಟಿಕ್ ಬಳಕೆ ನಿಲ್ಲಿಸಿ ಪರಿಸರ ಉಳಿಸಿ ಎಂಬ ಕಾರ್ಯಕ್ರಮ ನಡೆಯಿತು.
ಪ್ಲಾಸ್ಟಿಕ್ ಬಳಕೆ ನಿಲ್ಲಿಸಿ ಪರಿಸರ ಉಳಿಸಿ
ಎಂಬ ಘೋಷವಾಕ್ಯದೊಂದಿಗೆ ಏಕ ಬಳಕೆ ಪ್ಲಾಸ್ಟಿಕ್ ನಿಷೇದ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು.
ಈ ಕಾರ್ಯಕ್ರಮದ ಮುಖ್ಯ ಅತಿಥಿ ಡಿಸಿಎಫ್ ನಾಗರಾಜ್ ನಾಯ್ಕ್ ಮತ್ತು ಎಪಿಎಫ್ ಸುರೇಶ್
ಮತ್ತು ಕ್ರಿಯೆಟಿವ್ ಕವರ್ಸ್ನ ಶಿವಮೊಗ್ಗ
ಮಾಲೀಕರಾದ ವಿಜಯ್ ಬಿ ಆರ್,ಬಸವರಾಜ್ ಬಿ ಆರ್
ಹಾಗೂ ಅನೇಕ ಸಂಘ ಸಂಸ್ಥೆಗಳ ಮುಖ್ಯಸ್ಥರು ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಯಾಗಿ ನಡೆಸಿಕೊಟ್ಟರು