ಶಿವಮೊಗ್ಗ ಕೋಟೆ ಶ್ರೀ ಮಾರಿಕಾಂಬ ದೇವರಿ ಜಾತ್ರಾ ಮಹೋತ್ಸವವು ದಿ: 22/03/2022 ರಿಂದ ದಿ: 26/03/2022 ರವರೆಗೆ ಜರುಗಲಿದ್ದು, ಈ ಸಂದರ್ಭದಲ್ಲಿ ರಾಜಬೀದಿ ಉತ್ಸವ, ಸಾಂಸ್ಕøತಿಕ ಕಾರ್ಯಕ್ರಮಗಳು, ಪೂಜೆ/ಹರಕೆ/ಪ್ರಸಾದ ವಿನಿಯೋಗ, ರಾಜ್ಯ ಮಟ್ಟದ ಬಯಲು ಕುಸ್ತಿ ಹಾಗೂ ಇನ್ನಿತರ ಕಾರ್ಯಕ್ರಮಗಳು ನಡೆಯುವುದರಿಂದ ಜಾತ್ರಾ ಉತ್ಸವದಲ್ಲಿ ಸಾವಿರಾರು ಭಕ್ತಾದಿಗಳು ದೇವಸ್ಥಾನಕ್ಕೆ ಕಾರು, ದ್ವಿಚಕ್ರ, ಬಸ್ ಹಾಗೂ ಇತರೆ ವಾಹನಗಳಲ್ಲಿ ಬರುವುದರಿಂದ ವಾಹನ ಸಂಚಾರ ದಟ್ಟಣೆ ಹೆಚ್ಚಾಗುವ ಕಾರಣ ನಗರದ ಗಾಂಧಿಬಜಾರ್ ಮತ್ತು ಮಾರಿಕಾಂಬ ದೇವಸ್ಥಾನದ ಸುತ್ತಮುತ್ತಲಿನ ಹಾಗೂ ಎಸ್.ಪಿ.ಎಂ.ರಸ್ತೆಯಲ್ಲಿ ಸುಗುಮ ಸಂಚಾರದ ಹಿತದೃಷ್ಟಿಯಿಂದ ತಾತ್ಕಾಲಿಕವಾಗಿ ಮಾರ್ಗಗಳನ್ನು ಈ ಕೆಳಗಿನಂತೆ ಬದಲಾವಣೆ ಮಾಡಿ ಜಿಲ್ಲಾಧಿಕಾರಿಗಳು ಅದೇಶ ಹೊರಡಿಸಿದ್ದಾರೆ.

ಪರ್ಯಾಯ ಮಾರ್ಗ…

1. ಬೆಂಗಳೂರು- ಭದ್ರಾವತಿ-ಎನ್.ಆರ್.ಪುರ ಕಡೆಯಿಂದ ಬರುವ ಭಾರಿ ವಾಹನಗಳು ಮತ್ತು ಬಸ್‍ಗಳು ಎಂಆರ್‍ಎಸ್ ಸರ್ಕಲ್ ಬೈಪಾಸ್ ಮೂಲಕ ಶಿವಮೊಗ್ಗ ನಗರ ಪ್ರವೇಶ ಮಾಡುವುದು.

2. ಚಿತ್ರದುರ್ಗ-ಹೊಳೆಹೊನ್ನೂರು ಕಡೆಯಿಂದ ಬರುವ ಭಾರಿ ವಾಹನಗಳು ಮತ್ತು ಬಸ್‍ಗಳು ವಿದ್ಯಾನಗರ-ಎಂ.ಆರ್.ಎಸ್. ಸರ್ಕಲ್ ಬೈಪಾಸ್ ಮೂಲಕ ಶಿವಮೊಗ್ಗ ನಗರ ಪ್ರವೇಶ ಮಾಡುವುದು.

3. ಹೊನ್ನಾಳಿ-ಹೊಳಲೂರು ಕಡೆಯಿಂದ ಬರುವ ಭಾರಿ ವಾಹನಗಳು, ಸರಕು ಸಾಗಣೆ ವಾಹನಗಳು ಮತ್ತು ಬಸ್‍ಗಳು ಸಂಗೊಳ್ಳಿ ರಾಯಣ್ಣ ಸರ್ಕಲ್- ಕೆಇಬಿ ಸರ್ಕಲ್- ರೈಲ್ವೆ ಸ್ಟೇಷನ್-ಉಷಾ ನರ್ಸಿಂಗ್ ಹೋಂ ಸರ್ಕಲ್- 100 ಅಡಿ ರಸ್ತೆ ಮೂಲಕ ಶಿವಮೊಗ್ಗ ನಗರ ಪ್ರವೇಶ ಮಾಡುವುದು.

4. ಸರ್ಕಾರಿ ಮತ್ತು ಖಾಸಗಿ ಬಸ್ ನಿಲ್ದಾಣದಿಂದ ಬೆಂಗಳೂರು, ಭದ್ರಾವತಿ ಕಡೆಗೆ ಸಂಚರಿಸುವ ಎಲ್ಲಾ ವಾಹನಗಳು ಸಂದೇಶ್ ಮೋಟಾರ್ಸ್-ಬೈಪಾಸ್ ರಸ್ತೆ ಮೂಲಕ ಸಂಚರಿಸುವುದು.

ಕೋಟೆ ಶ್ರೀ ಮಾರಿಕಾಂಬ ದೇವಸ್ಥಾನದ ಸುತ್ತಮುತ್ತ 500 ಮೀಟರ್ ವ್ಯಾಪ್ತಿಯಲ್ಲಿ ಬರುವ ಎಲ್ಲಾ ರಸ್ತೆಗಳಲ್ಲಿ ಎಲ್ಲಾ ವಾಹನಗಳ ಸಂಚಾರ ನಿಷೇಧ ಮಾಡುವುದು. ಹೊಳಬಸ್ ಸ್ಟಾಪ್‍ನಿಂದ – ಬೆಕ್ಕಿನ ಕಲ್ಮಠ-ರಾಮಣ್ಣ ಶ್ರೇಷ್ಠಿ ಪಾರ್ಕ್‍ವರೆಗೆ ಎಲ್ಲಾ ವಾಹನಗಳ ಸಂಚಾರ ಮತ್ತು ನಿಲುಗಡೆ ನಿಷೇಧ ಮಾಡುವುದು. ದಿ: 22/03/2022 ರಂದ ಬೆಳಗ್ಗೆ 3.00 ಗಂಟೆಯಿಂದ ರಾ.11.00 ಗಂಟೆಯವರೆಗೆ ರಾಮಣ್ಣ ಶ್ರೇಷ್ಠಿ ಪಾರ್ಕ್‍ನಿಂದ ಗಾಂಧಿ ಬಜಾರ್-ಶಿವಪ್ಪನಾಯಕ ಸರ್ಕಲ್‍ವರೆಗೆ ಮತ್ತು ಶಿವಪ್ಪ ನಾಯಕ ಸರ್ಕಲ್ ಸುತ್ತಮುತ್ತ 500 ಮೀಟರ್ ವ್ಯಾಪ್ತಿಯಲ್ಲಿ ಎಲ್ಲಾ ವಾಹನಗಳ ಸಂಚಾರ ಮತ್ತು ನಿಲುಗಡೆ ನಿಷೇಧ ಮಾಡುವುದು.

ಈ ಎಲ್ಲಾ ಮಾರ್ಗ ಬದಲಾವಣೆಗಳು ಪೊಲೀಸ್ ವಾಹನಗಳು, ಅತೀಗಣ್ಯ ವ್ಯಕ್ತಿಗಳ ವಾಹನಗಳು, ಅಂಬುಲೆನ್ಸ್ ಹಾಗೂ ಮೂಲಭೂತ ಸೌಕರ್ಯ ಒದಗಿಸುವ ವಾಹನಗಳನ್ನು ಅನುಕೂಲಕ್ಕೆ ತಕ್ಕಂತೆ ಹೊರತುಪಡಿಸಿ ಸಂಚರಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳ ಆದೇಶದಲ್ಲಿ ಸೂಚಿಸಲಾಗಿದೆ.

ವರದಿ ಮಂಜುನಾಥ್ ಶೆಟ್ಟಿ…