ಶಿವಮೊಗ್ಗ: ವಿದ್ಯಾರ್ಥಿಗಳಿಗೆ ಗ್ರಾಮೀಣ ಜೀವನದ ಅರಿವು ಮೂಡಿಸಲು ಹಾಗೂ ಸೇವಾ ಮನೋಭಾವನೆ ಬೆಳೆಸಲು ಎನ್‌ಎಸ್‌ಎಸ್ ಸಹಕಾರಿ ಆಗುತ್ತದೆ ಎಂದು ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷ ಮಂಜುನಾಥ್ ಕದಂ ಹೇಳಿದರು.
ಶಿವಮೊಗ್ಗ ಜಿಲ್ಲೆಯ ಹೊಸಕೊಪ್ಪ ಗ್ರಾಮದಲ್ಲಿ ವಿಶ್ವವಿದ್ಯಾಲಯ ಶ್ರೀಮದ್ ರಂಭಾಪುರಿ ಕಲಾ ಮತ್ತು ವಾಣಿಜ್ಯ ಕಾಲೇಜು ಜ್ಞಾನಸಗರ ಶಂಕರಘಟ್ಟ ಆಶ್ರಯದಲ್ಲಿ ನಡೆದ ವಾರ್ಷಿಕ ವಿಶೇಷ ಎನ್‌ಎಸ್‌ಎಸ್ ಶಿಬಿರದಲ್ಲಿ ವಿಶೇಷ ಅತಿಥಿಯಾಗಿ ಮಾತನಾಡಿದರು.
ಯುವ ಸಮುದಾಯದಲ್ಲಿ ಆತ್ಮವಿಶ್ವಾಸ ಹಾಗೂ ಸದೃಢ ಆಲೋಚನಾ ಕ್ರಮಗಳನ್ನು ಬೆಳೆಸುವಲ್ಲಿ ಎನ್‌ಎಸ್‌ಎಸ್ ಪ್ರಮುಖ ಪಾತ್ರ ವಹಿಸುತ್ತದೆ. ಇಂದಿನ ಯುವಕರ ಮನೋಭಾವದಲ್ಲಿ ಒಳ್ಳೆಯ ಬದಲಾವಣೆಯಾದರೆ ಮಾತ್ರ ಸಾಮಾಜಿಕವಾಗಿ ಜೀವನದಲ್ಲಿ ಅಭಿವೃದ್ಧಿಯಾಗಲು ಸಾಧ್ಯ ಎಂದು ತಿಳಿಸಿದರು.
ರಾಷ್ಟ್ರೀಯ ಸೇವಾ ಯೋಜನೆ ಗ್ರಾಮೀಣ ಪ್ರದೇಶದಲ್ಲಿ ಮಾಡುವುದರಿಂದ ಗ್ರಾಮಗಳಲ್ಲಿ ಸ್ವಚ್ಛತೆ ಕಾರ್ಯಕ್ರಮಗಳು ಹಾಗೂ ಅರಿವು ಮೂಡಿಸುವ ಕಾರ್ಯಕ್ರಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಸಹಾಯವಾಗುತ್ತದೆ. ರಂಭಾಪುರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಉತ್ತಮ ಕೆಲಸ ಮಾಡುತ್ತಿರುವುದು ಸಂತೋಷದ ವಿಷಯವಾಗಿದೆ ಎಂದರು.
ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ವಿದ್ಯಾರ್ಥಿಗಳಿಗೆ ಕಲಿಯಲು ಸಾಕಷ್ಟು ವಿಷಯಗಳಿಗೂ ಅದರಲ್ಲಿ ಶಿಸ್ತು, ಗ್ರಾಮೀಣ ಜೀವನದ ವ್ಯವಸ್ಥೆ ಹಾಗೂ ಎಲ್ಲರೊಡನೆ ಸ್ನೇಹದಿಂದ ಬೆರೆತು ಜೀವನ ಸಾಗಿಸುವ ಪಾಠಗಳನ್ನು ಕಲಿಯುವಂತಹ ಸದಾವಕಾಶ ಎಲ್ಲಾ ಶಿಬಿರಾರ್ಥಿಗಳಿಗೆ ಸಿಗುತ್ತದೆ. ಅದನ್ನು ಸದುಪಯೋಗಪಡಿಸಿಕೊಂಡು ಎಲ್ಲರೂ ಜೀವನದಲ್ಲಿ ಮುಂದೆ ಬರಬೇಕು ಎಂದು ಸಲಹೆ ನೀಡಿದರು.
ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯ್ ಕುಮಾರ್ ಮಾತನಾಡಿ ಭಾವಪೂರ್ಣವಾದ ಹಾಡು ಮತ್ತು ಹಾಸ್ಯದಿಂದ ಎಲ್ಲಾ ಶಿಬಿರಾರ್ಥಿಗಳಿಗೆ ರಂಜಿಸಿ, ವಿದ್ಯಾರ್ಥಿಗಳಿಗೆ ಗ್ರಾಮೀಣ ಜೀವನದ ಅರಿವು ಹಾಗೂ ಕೆಲ ಶಿಸ್ತುಗಳನ್ನು ಕಲಿಯಲು ಸದಾವಕಾಶ ಸಿಗುತ್ತದೆ. ಎಲ್ಲಾ ವಿದ್ಯಾರ್ಥಿಗಳು ಇದರ ಸದುಪಯೋಗಪಡಿಸಿಕೊಂಡು ತಂದೆ ತಾಯಿ ಹಾಗೂ ಗುರುಗಳಿಗೆ ಶಾಲಾ ಕಾಲೇಜುಗಳಿಗೆ ಒಳ್ಳೆಯ ಹೆಸರು ತರಬೇಕು. ಸಮಾಜದಲ್ಲಿ ಉನ್ನತ ಸ್ಥಾನ ಹೊಂದಬೇಕು ಎಂದದು ತಿಳಿಸಿದರು.
ಹೊಸಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭಾಗ್ಯಲಕ್ಷಿö್ಮÃ, ಉಪಾಧ್ಯಕ್ಷೆ ಶೀಲಾ ಬಸವರಾಜ್, ಸದಸ್ಯರಾದ ಲೀಲಾವತಿ ಗಂಗೂಬಾಯಿ ನಾಗರಾಜ್ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.
ರಂಭಾಪುರಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ರಾಷ್ಟಿçÃಯ ಸೇವಾ ಯೋಜನೆ ಕಾರ್ಯಕ್ರಮ ಅಧಿಕಾರಿ ನಾಗರಾಜ.ಜಿ, ಶರತ್.ಪಿ, ಉಪನ್ಯಾಸಕಿ ಬಿ.ಚೈತ್ರಾ, ಸುಕನ್ಯಾ.ಎಂ.ಸಿ ಹಾಗೂ ಕಾಲೇಜಿನ ಶಿಬಿರಾರ್ಥಿಗಳು ವಿದ್ಯಾರ್ಥಿಗಳು ಹಾಗೂ ಹೊಸಕೊಪ್ಪ ಗ್ರಾಮದ ಗ್ರಾಮಸ್ಥರು ಉಪಸ್ಥಿತರಿದ್ದರು.