ಶಿವಮೊಗ್ಗ: ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿ ಹಾಗೂ ಸಿಬ್ಬಂದಿಗಳು ತಮ್ಮ ಹುದ್ದೆ ಮತ್ತು ನಾಮಾಂಕಿತವನ್ನು ಪ್ರದರ್ಶಿವುದರ ಜೊತೆಯಲ್ಲಿ ಭ್ರಷ್ಟಾಚಾರ ಮತ್ತು ಲಂಚಾವತಾರಕ್ಕೆ ಕಡಿವಾಣ ಹಾಕುವಂತೆ ಅಣ್ಣಾ ಹಜಾರೆ ಹೋರಾಟ ಸಮಿತಿ ಇಂದು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದೆ.

ರಾಜ್ಯ ಸರ್ಕಾರ ಹಾಗೂ ನ್ಯಾಯಾಲಯದ ಆದೇಶದ ಹಿನ್ನಲೆಯ ಆಧಾರದ ಮೇಲೆ ಜಿಲ್ಲೆಯ ಎಲ್ಲಾ ಸರ್ಕಾರಿ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ವಲಯದವರು ತಮ್ಮ ನಾಮಾಂಕಿತ ಹಾಗೂ ಅವರ ಹುದ್ದೆಯನ್ನು ಅವರು ಕೂರುವ ಮೇಜಿನ ಮುಂಭಾಗದಲ್ಲಿ ಪ್ರದರ್ಶಿಸುವ ಮೂಲಕ ಯಾವುದೇ ಗೊಂದಲವಿಲ್ಲದೇ ಜನ ಸಾಮಾನ್ಯರು ತಮ್ಮ ಕೆಲಸವನ್ನು ಸುಲಭವಾಗಿ ಮಾಡಿಸಿಕೊಂಡು ಹೋಗುವುದಕ್ಕೆ ಸುತ್ತೋಲೆ ಹೊರಡಿಸಬೇಕೆಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಜಿಲ್ಲೆಯ ಬಹುತೇಕ ಇಲಾಖೆಗಳಾದ ಸಬ್ ರಿಜಿಸ್ಟ್ರಾರ್, ಆರ್.ಟಿ.ಒ., ಮಹಾನಗರ ಪಾಲಿಕೆ, ತಾಲೂಕು ಕಚೇರಿ ಹಾಗೂ ಇನ್ನಿತರ ಅಭಿವೃದ್ಧಿ ಕಾಮಗಾರಿ ನಡೆಸುತ್ತಿರುವ ಬಹುತೇಕ ಇಲಾಖೆಗಳಲ್ಲಿ ಭ್ರಷ್ಟಾಚಾರ ಮತತ್ಉ ಲಂಚಾವತಾರ ನಡೆಯುತ್ತಿದೆ. ಹಾಗೂ ಅಭಿವೃದ್ಧಿ ಕಾಮಗಾರಿಗಳು ಕೂಡ ಕಳಪೆ ಗುಣಮಟ್ಟದಿಂದ ನಡೆಯುತ್ತಿದೆ ಎಂದು ಆರೋಪಿಸಿದರು.ಅಧಿಕಾರಿಗಳು ಕೂರುವ ಮೇಜಿನ ಮೇಲೆ ನಾಮಫಲಕ ಹಾಕುವ ಮೂಲಕ ಲಂಚಾವತಾರಕ್ಕೆ ಕಡಿವಾಣ ಹಾಕಲು ಹಾಗೂ ಜಿಲ್ಲೆಯನ್ನು ಭ್ರಷ್ಟಾಚಾರದಿಂದ ಮುಕ್ತಗೊಳಿಸಬೇಕೆಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ಸಮಿತಿಯ ಪ್ರಮುಖರಾದ ಡಾ. ಬಿ.ಎಂ. ಚಿಕ್ಕಸ್ವಾಮಿ, ಡಾ. ಎನ್.ಎಲ್. ನಾಯಕ್, ಅಶೋಕ್ ಯಾದವ್, ಶೇಖರ್ ಗೌಳೇರ್ ಮೊದಲಾದವರಿದ್ದರು.

ವರದಿ ಮಂಜುನಾಥ್ ಶೆಟ್ಟಿ…