ಶಿವಮೊಗ್ಗ: ಬ್ಯಾಂಕ್ ಗಳ ಖಾಸಗೀಕರಣ ವಿರೋಧಿಸಿ, ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಇಂದು ಬ್ಯಾಂಕ್ ನೌಕರರು ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯ ಸಹಕಾರದೊಂದಿಗೆ ಬ್ಯಾಂಕ್ಗಳ ಮುಂದೆ ಪ್ರತಿಭಟನೆ ನಡೆಸಿದರು.
ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸಬೇಕು. ಖಾಸಗೀಕರಣ ಬೇಡ, ಎಲ್ಲಾ ಶ್ರಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸಬೇಕು, ಗುತ್ತಿಗೆ ಕಾರ್ಮಿಕರನ್ನು ಕಾಯಂಗೊಳಿಸಬೇಕು. ಹಳೆ ರೀತಿಯ ಪಿಂಚಣಿ ಯೋಜನೆ ಜಾರಿಯಾಗಬೇಕು ಎಂಬುದು ಸೇರಿದಂತೆ ಸುಮಾರು 12 ಕ್ಕೂ ಹೆಚ್ಚು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಲ್ಲಿನ ಮಾರ್ಗದರ್ಶಿ ಕೆನರಾ ಬ್ಯಾಂಕ್ ಮುಂಭಾಗದಲ್ಲಿ ಬ್ಯಾಂಕ್ ನೌಕರರು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಪ್ರತಿಭಟನೆಯಲ್ಲಿ ಬ್ಯಾಂಕ್ ನೌಕರರ ಸಂಘದ ಅಧ್ಯಕ್ಷ ನಾಗರಾಜ್, ಜಂಟಿ ಕಾರ್ಯದರ್ಶಿ ವೇಣುಗೋಪಾಲ್, ನಿವೃತ್ತ ಸಂಘದ ಅಧ್ಯಕ್ಷ ಮಂಜುನಾಥ್, ಕಾರ್ಯದರ್ಶಿ ಚಂದ್ರಶೇಖರ್ ಸೇರಿದಂತೆ ಹಲವರಿದ್ದರು.ನಾಳೆಯೂ ಕೂಡ ಮುಷ್ಕರ ಮುಂದುವರೆಯಲಿದ್ದು, ಬ್ಯಾಂಕ್ ವ್ಯವಹಾರಗಳಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ.