ಶಿವಮೊಗ್ಗ : ನಗರದ ಪ್ರತಿಷ್ಟಿತ ರಾಷ್ಟ್ರೀಯ ಶಿಕ್ಷಣ ಸಮಿತಿಯ ನೂತನ ಅಧ್ಯಕ್ಷರಾಗಿ ಸಹಕಾರಿ ತಜ್ಞ ಜಿ.ಎಸ್.ನಾರಾಯಣರಾವ್ ಹಾಗೂ ಕಾರ್ಯದರ್ಶಿಗಳಾಗಿ ಎಂಪಿಎಂ ನಿವೃತ್ತ ಎಂಜಿನಿಯರ್ ಎಸ್.ಎನ್.ನಾಗರಾಜ ಆಯ್ಕೆಯಾಗಿದ್ದಾರೆ.
ಬುಧವಾರ ನಿರ್ದೇಶಕರಾದ ಟಿ.ಆರ್.ಅಶ್ವಥನಾರಾಯಣ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ 2022-27 ನೇ ಸಾಲಿನ ಪ್ರಥಮ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಿತು.
ಉಪಾಧ್ಯಕ್ಷರಾಗಿ ಉದ್ಯಮಿಗಳಾದ ಸಿ.ಆರ್.ನಾಗರಾಜ,
ಸಹ ಕಾರ್ಯದರ್ಶಿಗಳಾಗಿ ಖ್ಯಾತ ವೈದ್ಯರಾದ ಡಾ.ಪಿ.ನಾರಾಯಣ್
ಖಜಾಂಚಿಗಳಾಗಿ ಉದ್ಯಮಿ ಡಿ.ಜಿ.ರಮೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಇತ್ತೀಚೆಗೆ ನಡೆದ ಚುನಾವಣೆಯಲ್ಲಿ 15 ಜನ ನಿರ್ದೇಶಕರಾಗಿ ಆಯ್ಕೆಯಾಗಿದ್ದರು.