ಶಿವಮೊಗ್ಗ: ಬಾಬು ಜಗಜೀವನರಾಂ ಹಸಿರುಕ್ರಾಂತಿಯ ರೂವಾರಿ ಅಷ್ಟೇ ಅಲ್ಲ, ಕಾರ್ಮಿಕ ಬದುಕಿನ ಬೆಳಕು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಹೇಳಿದರು.

ಅವರು ಇಂದು ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಿದ್ದ ಡಾ. ಬಾಬು ಜಗಜೀವನರಾಂ ಅವರ 115 ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.ಬಾಬು ಜಗಜೀವನರಾಂ ಕಾರ್ಮಿಕರ ಕಲ್ಯಾಣಕ್ಕಾಗಿ ಹಲವು ಕಾಯ್ದೆಗಳನ್ನು ಜಾರಿಗೆ ತಂದಿದ್ದಾರೆ. ಕಾರ್ಮಿಕರ ಕಲ್ಯಾಣಕ್ಕಾಗಿ ದುಡಿದಿದ್ದಾರೆ. ಅವರನ್ನು ಕಾರ್ಮಿಕರ ಬದುಕಿನ ಬೆಳಕು ಎಂದೇ ಬಿಂಬಿಸಲಾಗುತ್ತದೆ. ಹಲವು ವರ್ಷಗಳ ತನಕ ಸಚಿವರಾಗಿ, ಉಪಪ್ರಧಾನಿಯಾಗಿ ಒಳ್ಳೆಯ ಆಡಳಿತವನ್ನು ನೀಡಿದ್ದಾರೆ ಎಂದರು.ಅಸ್ಪೃಷ್ಯತೆ ನಿವಾರಣೆಗಾಗಿ ನಿರಂತರ ಹೋರಾಟವನ್ನು ಮಾಡಿದವರು ಇವರು. ಹಾಗಾಗಿಯೇ ದಲಿತ ನಾಯಕ ಎಂದು ಅವರನ್ನು ಕರೆಯಲಾಗುತ್ತದೆ. ಕನಿಷ್ಠ ಕೂಲಿಯನ್ನು ಜಾರಿಗೆ ತಂದವರು ಇವರು. ಇವರ ಆದರ್ಶಗಳನ್ನು ಎಲ್ಲರೂ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.

ಕಾಂಗ್ರೆಸ್ ಮುಖಂಡ ಶಿವಲಿಂಗಮೂರ್ತಿ ಮಾತನಾಡಿ, ಬಾಬು ಜಗಜೀವನರಾಂ ಸಮುದಾಯಗಳನ್ನು ಪ್ರತಿಬಿಂಬಿಸಿದವರು. ಹೋರಾಟದ ಗುಣಗಳನ್ನು ಬೆಳೆಸಿಕೊಂಡವರು. ಇವರು ರಕ್ಷಣಾ ಮಂತ್ರಿಯಾಗಿದ್ದಾಗ ಯಶಸ್ವಿಯಾಗಿ ಭಾರತ –ಪಾಕಿಸ್ತಾನ ಯುದ್ಧ ನಿರ್ವಹಿಸಿ ಬಾಂಗ್ಲಾದೇಶದ ಉದಯಕ್ಕೆ ಕಾರಣರಾದವರು ಎಂದರು.ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಹೆಚ್.ಎಂ. ಚಂದ್ರಶೇಖರಪ್ಪ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸಿ.ಎಸ್. ಚಂದ್ರಭೂಪಾಲ್, ಉಪಾಧ್ಯಕ್ಷ ಶ್ರೀಧರಮೂರ್ತಿ ನವುಲೆ, ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾಧ್ಯಕ್ಷ ಇಕ್ಕೇರಿ ರಮೇಶ್, ಸೇವಾದಳ ಜಿಲ್ಲಾಧ್ಯಕ್ಷ ವೈ.ಹೆಚ್. ನಾಗರಾಜ್, ಮುಖಂಡ ಡಾ. ಶ್ರೀನಿವಾಸ್ ಕರಿಯಣ್ಣ, ಎಲ್. ರಾಮೇಗೌಡ, ಎಸ್.ಟಿ. ಶ್ರೀನಿವಾಸ್, ಎಂ. ಚಂದನ್, ಎನ್.ಡಿ. ಪ್ರವೀಣ್ ಕುಮಾರ್, ರಾಜಶೇಖರ್, ಯು.ಕೆ. ಪ್ರಕಾಶ್ ಮೊದಲಾದವರಿದ್ದರು.

ವರದಿ ಮಂಜುನಾಥ್ ಶೆಟ್ಟಿ…