ಶಿವಮೊಗ್ಗ: ರಾಜೇಂದ್ರನಗರದ ರೋಟರಿ ಶಾಲೆ ಆವರಣದಲ್ಲಿ ರೋಟರಿ ಶಿವಮೊಗ್ಗ ಪೂರ್ವ ಮತ್ತು ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಸಂಯುಕ್ತ ಆಶ್ರಯದಿಂದ ಏ. 10ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ “ಸೀಳು ತುಟಿ ಮತ್ತು ಸೀಳು ಅಂಗಳ ಪೀಡಿತರನ್ನು ಗುರುತಿಸುವಿಕೆ ಮತ್ತು ಉಚಿತ ಶಸ್ತ್ರ ಚಿಕಿತ್ಸಾ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷ ಮಂಜುನಾಥ ಕದಂ ತಿಳಿಸಿದ್ದಾರೆ.
ಬೆಂಗಳೂರಿನ ಭಗವಾನ್ ಮಹಾವೀರ್ ಜೈನ್ ಆಸ್ಪತ್ರೆ ಹಾಗೂ ರೋಟರಿ ಶಿವಮೊಗ್ಗ ಪೂರ್ವ, ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಸಹಯೋಗದಲ್ಲಿ ಶಿಬಿರ ಹಮ್ಮಿಕೊಳ್ಳಲಾಗಿದ್ದು, ಶಿವಮೊಗ್ಗ, ಗ್ರಾಮಾಂತರ ಭಾಗ ಹಾಗೂ ಸುತ್ತಮುತ್ತಲಿನ ಭಾಗದ ಸಾರ್ವಜನಿಕರು ಶಿಬಿರದ ಸದುಪಯೋಗ ಪಡಿಸಿಕೊಳ್ಳಬೇಕು.
ಎಲ್ಲ ವಯೋಮಾನದವರು ಶಿಬಿರದಲ್ಲಿ ಪಾಲ್ಗೊಳ್ಳಬಹುದು. ಆಯ್ಕೆಯಾದವರನ್ನು ಶಸ್ತçಚಿಕಿತ್ಸೆಗೆ ಶಿಬಿರದ ದಿನ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗುತ್ತದೆ.
ಶಸ್ತ್ರಚಿಕಿತ್ಸೆಯ ಸಂದರ್ಭದಲ್ಲಿ ರೋಗಿ ಮತ್ತು ಅವರ ಮೇಲ್ವಿಚಾರಕರೊಬ್ಬರಿಗೆ ಉಚಿತ ಊಟ, ವಸತಿ ಹಾಗೂ ಔಷಧೋಪಚಾರ ಒದಗಿಸಲಾಗುವುದು. ಹಿಂದೆ ಬೇರೆ ಕಡೆ ತಪಾಸಣೆ ಮಾಡಿಸಿದವರು ಕೂಡ ಮರು ತಪಾಸಣೆ ಮಾಡಿಸಿಕೊಳ್ಳಬಹುದಾಗಿದೆ ಎಂದು ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷ ಮಂಜುನಾಥ ಕದಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಾಹಿತಿಗೆ 9844917666, 9448105918, 8660307127, 7019258005 ಅಥವಾ 9964078222 ಸಂಪರ್ಕಿಸಬಹುದಾಗಿದೆ.