ಬೆಂಗಳೂರಿನ ಅರಮನೆ ಮೈದಾನದಲ್ಲಿ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಬೆಂಗಳೂರು ವಾಸಿಗಳಿಗಾಗಿ ಗೃಹ ಸಚಿವರಾದ ಶ್ರೀ ಅರಗ ಜ್ಞಾನೇಂದ್ರ ರವರು ಆಯೋಜಿಸಿದ್ದ ಮಲೆನಾಡಿಗರ ಸ್ನೇಹ ಸಮ್ಮಿಲನ ಕಾರ್ಯಕ್ರಮವನ್ನು ನಿಕಟ ಪೂರ್ವ ಮುಖ್ಯಮಂತ್ರಿ ಶ್ರೀ ಬಿ. ಎಸ್. ಯಡಿಯೂರಪ್ಪನವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಶಿವಮೊಗ್ಗ ಲೋಕಸಭಾ ಸದಸ್ಯರಾದ ಬಿ. ವೈ ರಾಘವೇಂದ್ರ ರವರು ಉದ್ಘಾಟಿಸಿದರು.

ಈ ಸಭೆಯಲ್ಲಿ ಬಾರ್ಕೂರು ಮಹಾಸಂಸ್ಥಾನದ ಪೀಠಾಧಿಪತಿಗಳು ಹಾಗೂ ಬೆಜ್ಜವಳ್ಳಿಯ ಶ್ರೀ ವಿಶ್ವ ಸಂತೋಷ್ ಭಾರತಿ ಗುರೂಜಿ , ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್.ಅಶ್ವತ್ಥ ನಾರಾಯಣ, ಶಾಸಕರಾದ ಹಾಲಪ್ಪ, ಕುಮಾರ ಬಂಗಾರಪ್ಪ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಡಿ. ಎನ್.ಜೀವರಾಜ ಮತ್ತು ಇತರೆ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ವರದಿ ಮಂಜುನಾಥ್ ಶೆಟ್ಟಿ…