ಶಿವಮೊಗ್ಗ: ದಕ್ಷಿಣ ಭಾರತದ ಉದ್ಯಮಿಗಳಿಗೆ ರಾಷ್ಟ್ರೀಯ ಮಟ್ಟದಲ್ಲಿ ಜವಾಬ್ದಾರಿ ಸಿಗುತ್ತಿರುವುದು ವಿಶೇಷವಾದ ಸಂಗತಿಯಾಗಿದ್ದು, ಕೈಗಾರಿಕಾ ಕ್ಷೇತ್ರದಲ್ಲಿ ಚಂದ್ರಶೇಖರ್ ಅವರ ಸಾಧನೆ ಅಪಾರ ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್ ಹೇಳಿದರು.
ನಗರದ ಸುವರ್ಣ ಸಾಂಸ್ಕೃತಿಕ ಭವನದಲ್ಲಿ ಆಯೋಜಿಸಿದ್ದ ದಿ ಇನ್ಸ್ಟಿಟ್ಯೂಟ್ ಆಫ್ ಇಂಡಿಯನ್ ಫೌಂಡ್ರಿಮೆನ್ ಸಂಘಟನೆ ರಾಷ್ಟಿçÃಯ ಉಪಾಧ್ಯಕ್ಷ ಡಿ.ಎಸ್.ಚಂದ್ರಶೇಖರ್ ಅವರಿಗೆ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.
ಮಾಚೇನಹಳ್ಳಿಯ ಶಾಂತಲಾ ಸ್ಪೇರೋಕಾಸ್ಟ್ನಲ್ಲಿ ಉಪಾಧ್ಯಕ್ಷ ಆಗಿರುವ ಚಂದ್ರಶೇಖರ್ ಅವರು ದಶಕಗಳಿಂದ ಉದ್ಯಮಿಯಾಗಿ ಹಲವಾರು ಜನರಿಗೆ ಉದ್ಯೋಗ ನೀಡಿದ್ದಾರೆ. ನೂರಾರು ಕುಟುಂಬಗಳಿಗೆ ಆಸರೆಯಾಗಿದ್ದಾರೆ. ಉದ್ಯಮ ಕ್ಷೇತ್ರದ ಜತೆಯಲ್ಲಿ ಸೇವಾ ಕ್ಷೇತ್ರದಲ್ಲಿಯು ನಿರಂತರವಾಗಿ ಕೈಜೋಡಿಸುತ್ತಿದ್ದು, ರೋಟರಿ ಕ್ಲಬ್ ಸೇರಿದಂತೆ ವಿವಿಧ ಸಂಘಗಳಲ್ಲಿ ಸೇವೆ ಸಲ್ಲಿಸಿದ್ದಾರೆ ಎಂದು ತಿಳಿಸಿದರು.
ಚಂದ್ರಶೇಖರ್ ಅವರ ಕಾರ್ಯಕ್ಕೆ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಿಂದ ನಿರಂತರವಾಗಿ ಸಂಪೂರ್ಣ ಸಹಕಾರ ಇರುತ್ತದೆ. ಚಂದ್ರಶೇಖರ್ ಅವರು ರಾಷ್ಟೀಯ ಉಪಾಧ್ಯಕ್ಷ ಸ್ಥಾನ ವಹಿಸುತ್ತಿರುವುದು ಶಿವಮೊಗ್ಗ ಜಿಲ್ಲೆ ಹಾಗೂ ರಾಜ್ಯಕ್ಕೆ ಹೆಮ್ಮೆಯ ಸಂಗತಿಯಾಗಿ ಎಂದರು.
ದಿ ಇನ್ಸ್ಟಿಟ್ಯೂಟ್ ಆಫ್ ಇಂಡಿಯನ್ ಫೌಂಡ್ರಿಮೆನ್ ಸಂಘಟನೆ ರಾಷ್ಟ್ರೀಯ ಉಪಾಧ್ಯಕ್ಷ ಡಿ.ಎಸ್.ಚಂದ್ರಶೇಖರ್ ಅವರಿಗೆ ಶಿವಮೊಮಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಿಂದ ಸನ್ಮಾನಿಸಲಾಯಿತು.
ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡ, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಬಿ.ಗೋಪಿನಾಥ್, ರಾಜ್ಯ ಕಾರ್ಯದರ್ಶಿ ವಸಂತ್ ಹೋಬಳಿದಾರ್, ಸಹಕಾರ್ಯದರ್ಶಿ ಜಿ.ವಿಜಯ್ಕುಮಾರ್, ಸಂತೋಷ್, ರಮೇಶ್ ಹೆಗಡೆ, ಗಣೇಶ ಅಂಗಡಿ, ಪರಮೇಶ್ವರ್, ಶರತ್ ಭೂಪಾಳಂ, ಸಂಘದ ಮಾಜಿ ಅಧ್ಯಕ್ಷ ಡಿ.ಎಂ.ಶAಕರಪ್ಪ, ಅಶ್ವತ್ಥ್ನಾರಾಯಣ್, ಮಹೇಂದ್ರಪ್ಪ, ಶೀಲಾ ಚಂದ್ರಶೇಖರ್ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.