ಶಿವಮೊಗ್ಗ: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹು ನಿರೀಕ್ಷಿತ ‘ಕೆಜಿಎಫ್ ಚಾಪ್ಟರ್ 2’ ಇಂದು ವಿಶ್ವದಾದ್ಯಂತ ತೆರೆ ಕಂಡಿದ್ದು, ಶಿವಮೊಗ್ಗದಲ್ಲೂ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ.ನಗರದ ಮಲ್ಲಿಕಾರ್ಜುನ, ವೀರಭದ್ರೇಶ್ವರ ಹಾಗೂ ಸಿಟಿ ಸೆಂಟರ್ ಮಾಲ್ ನ ಭಾರತ್ ಸಿನಿಮಾಸ್ ನಲ್ಲಿ ಬೆಳಗ್ಗೆ 6 ಗಂಟೆಯಿಂದಲೇ ಚಿತ್ರಪ್ರದರ್ಶನವಾಗುತ್ತಿದ್ದು, ಯಶ್ ಅಭಿಮಾನಿಗಳು ನೆಚ್ಚಿನ ನಟನನ್ನು ನೋಡಲು ಮುಗಿಬಿದ್ದ ದೃಶ್ಯಕಂಡು ಬಂದಿದೆ.

ಇನ್ನು ತೆರೆ ಮೇಲೆ ಯಶ್ ಆಗಮಿಸುತ್ತಿದ್ದಂತೆ ಕುಣಿದು ಕುಪ್ಪಳಿಸಿದ ಅಭಿಮಾನಿಗಳು ಸಂಭ್ರಮಿಸಿದ್ದಾರೆ. ಚಿತ್ರಮಂದಿರಗಳ ಬಳಿ ಫ್ಲೆಕ್ಸ್, ಬ್ಯಾನರ್ ಹೂವಿನ ಹಾರ ಹಾಕಿ ಅಭಿಮಾನಿಗಳು ತಮ್ಮ ಅಭಿಮಾನ ತೋರಿದರು. ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಡೊಳ್ಳು ಕುಣಿತಕ್ಕೆ ಅಭಿಮಾನಿಗಳು ಸ್ಟೆಪ್ ಹಾಕಿದರು.ಚಿತ್ರಮಂದಿರಗಳ ಬಳಿ ಹಬ್ಬದ ವಾತಾವರಣವೇ ಕಂಡು ಬಂದಿದೆ. ಯಶ್ ಅಭಿಮಾನಿಗಳು ಮಾತ್ರವಲ್ಲದೇ ಸಿನಿ ರಸಿಕರು ಕೂಡ ಸಿನಿಮಾ ನೋಡಲು ಮುಗಿಬಿದ್ದಿದ್ದು, ಎಲ್ಲೆಡೆ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಚಿತ್ರ ಬಿಡುಗಡೆಯಾದ ಚಿತ್ರಮಂದಿರಗಳ ಬಳಿ ಅಭಿಮಾನಿಗಳು, ಪ್ರೇಕ್ಷಕರ ಜಾತ್ರೆಯೇ ಸೇರಿತ್ತು.

ವರದಿ ಮಂಜುನಾಥ್ ಶೆಟ್ಟಿ…