ಸ್ಯಾಂಡಲ್ವುಡ್ನ ಬಹುನಿರೀಕ್ಷಿತ ಚಿತ್ರ 777 ಚಾರ್ಲಿ ಚಿತ್ರವು ಜೂನ್ 10 ವಿಶ್ವಾದ್ಯಂತ ತೆರೆಗೆ ಬರಲಿದೆ ಎಂದು ಚಿತ್ರತಂಡ ತಿಳಿಸಿದೆ.ಚಿತ್ರದಲ್ಲಿ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ನಾಯಕ ನಟರಾಗಿ ಅಭಿನಯಿಸಿದ್ದಾರೆ.
ಚಿತ್ರವನ್ನು ಜಿ.ಎಸ್. ಗುಪ್ತ ಮತ್ತು ರಕ್ಷಿತ್ ಶೆಟ್ಟಿ ರವರು ನಿರ್ಮಾಣ ಮಾಡಿದ್ದಾರೆ ಕಿರಣ್ ರಾಜ್ ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ಬಹುತಾರಾಗಣದಲ್ಲಿ ಹಿರಿಯ ನಟರು ಅಭಿನಯಿಸಿದ್ದಾರೆ.ಚಿತ್ರವು ಜೂನ್ 10 ರಂದು ವಿಶ್ವಾದ್ಯಂತ ತೆರೆಗೆ ಬರಲಿದೆ.ಚಿತ್ರ ಪ್ರದರ್ಶನದ ನಂತರ ಪ್ರೇಕ್ಷಕರು, ಅಭಿಮಾನಿಗಳು ಚಿತ್ರವನ್ನು ನೋಡಿ ಗೆಲ್ಲಿಸಬೇಕೆಂದು ಚಿತ್ರ ತಂಡ ಕೋರಿದ್ದಾರೆ.