ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಶಿವಮೊಗ್ಗ ನಗರದ ಹಲವು ಭಾಗಗಳಲ್ಲಿ ಆಹಾರದ ಅವಶ್ಯಕತೆ ಇರುವವರಿಗೆ “ಹಸಿದವರಿಗೆ ಅನ್ನ” ಎಂಬ ಕಾರ್ಯಕ್ರಮದಡಿ 52ನೇ ದಿನ ಊಟದ ಪ್ಯಾಕೆಟ್ ಹಾಗೂ ನೀರಿನ ಬಾಟಲ್, ಗಳನ್ನು ನಗರದ ಖಾಸಗಿ ಬಸ್ ನಿಲ್ದಾಣ , ಬೈಪಾಸ್ ಹೈವೇ ರಸ್ತೆಯಲ್ಲಿ ದೂರದ ಊರುಗಳಿಂದ ಬಂದಂತಹ ಲಾರಿ ಚಾಲಕರು ,ಕ್ಲೀನರ್ ಗಳಿಗೆ ಹಾಗೂ ಹಲವು ಆಸ್ಪತ್ರೆಗಳ ಮುಂಭಾಗ ಆಹಾರದ ಅವಶ್ಯಕತೆ ಇರುವವರಿಗೆ ವಿತರಿಸಿದರು.

ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಕೆ ರಂಗನಾಥ್ ,ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್ .ಪಿ.ಗಿರೀಶ್ ಯುವ ಕಾಂಗ್ರೆಸ್ ಉತ್ತರ ಬ್ಲಾಕ್ ಅಧ್ಯಕ್ಷ ಬಿ ಲೋಕೇಶ್ , ಗ್ರಾಮಾಂತರ ಅಧ್ಯಕ್ಷ ಈಟಿ ನಿತಿನ್ , ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಎಸ್ ಕುಮರೇಶ್ ಪದಾಧಿಕಾರಿಗಳಾದ ಮಂಜುನಾಥ್ ,ರಾಹುಲ್ ಸೀಗೆಹಟ್ಟಿ, ಇರ್ಫಾನ್ ,ನವೀನ್, ಮನೋಜ್ ಇತರರು ಉಪಸ್ಥಿತರಿದ್ದರು.

ವರದಿ ಮಂಜುನಾಥಶೆಟ್ಟಿ ಶಿವಮೊಗ್ಗ

ಶಿವಮೊಗ್ಗದ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153