ಶಿವಮೊಗ್ಗ: ಹನುಮ ಜಯಂತಿ ಅಂಗವಾಗಿ ಶಿವಮೊಗ್ಗ ನಗರ ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ನಿಂದ ನಗರದ ಜ್ಯುವೆಲ್ ರಾಕ್ ಹೋಟೆಲ್ ರಸ್ತೆಯಲ್ಲಿರುವ ಪಂಚಮುಖಿ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ದೇವಸ್ಥಾನಕ್ಕೆ ಆಗಮಿಸಿದ್ದ ಭಕ್ತಾದಿಗಳಿಗೆ ಹಾಗೂ ಸಾರ್ವಜನಿಕರಿಗೆ ಪಾನಕ ಮತ್ತು ಕೋಸಂಬರಿ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ. ರಂಗನಾಥ್, ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಬಿ. ಲೋಕೇಶ್, ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ಪದಾಧಿಕಾರಿಗಳಾದ ಕೆ.ಎಲ್. ಪವನ್ , ರಾಹುಲ್ ಸೀಗೆಹಟ್ಟಿ, ದರ್ಶನ್ ಶಾಮ್, ಅನು ಕೇಬಲ್ , ಪೂರ್ವಿಕ್, ವತನ್ ಲಾಲ್, ಶಿವು, ಹಾಗೂ ಕಾರ್ಯಕರ್ತರು ಇದ್ದರು.

ವರದಿ ಮಂಜುನಾಥ್ ಶೆಟ್ಟಿ…