ಶಿವಮೊಗ್ಗ : ನಿಜವಾದ ಗುಣಾತ್ಮಕ ಶಿಕ್ಷಣದಿಂದ ಮಾತ್ರ ಧನಾತ್ಮಕ ಸಮಾಜ ನಿರ್ಮಾಣ ಮಾಡಲು ಸಾಧ್ಯವಾಗಲಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣರಾವ್ ಅಭಿಪ್ರಾಯಪಟ್ಟರು.
ಮಂಗಳವಾರ ನಗರದ ರಾಷ್ಟ್ರೀಯ ಶಿಕ್ಷಣ ಮಹಾವಿದ್ಯಾಲಯ ಕಾಲೇಜಿನಲ್ಲಿ ಕೆಎಸ್ಓಯು ಪ್ರಥಮ ವರ್ಷದ ಬಿ.ಇಡಿ ಪ್ರಶಿಕ್ಷಣಾರ್ಥಿಗಳ ಸಂಪರ್ಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಕಲಿಕೆಯ ಹಸಿವಿರುವಾತ ಮಾತ್ರ ನಿಜವಾದ ಶಿಕ್ಷಕನಾಗುತ್ತಾನೆ. ಶಿಕ್ಷಕರಲ್ಲಿನ ವೃತ್ತಿ ಬದ್ದತೆಯಿಂದ ವಿದ್ಯಾರ್ಥಿಗಳ ಭವಿಷ್ಯ ಉತ್ತಮವಾಗಿ ರೂಪಗೊಳ್ಳಲು ಸಾಧ್ಯವಾಗಲಿದೆ ಎಂದು ಹೇಳಿದರು.
ರಾಷ್ಟ್ರೀಯ ಶಿಕ್ಷಣ ಸಮಿತಿ ಖಜಾಂಚಿಗಳಾದ ಡಿ.ಜಿ.ರಮೇಶ್ ಮಾತನಾಡಿ ಯಾವುದೇ ವ್ಯಕ್ತಿಯ ಉನ್ನತಿಯಲ್ಲಿ ಶಿಕ್ಷಕರ ಪಾತ್ರ ಮಹತ್ವದಾಗಿರುತ್ತದೆ. ಅಂತಹ ವೃತ್ತಿಯಲ್ಲಿ ತೊಡಗಿಸಿಕೊಳ್ಳುವಾಗ ಸಮಾಜಮುಖಿ ಆಲೋಚನೆಗಳತ್ತ ಹೆಚ್ಚು ಗಮನ ವಹಿಸಬೇಕಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಚಿದಾನಂದ. ಎನ್.ಕೆ., ಸಹಾಯಕ ಪ್ರಾಧ್ಯಾಪಕರಾದ ಡಾ.ಮಂಜು.ಎನ್.ಡಿ, ಡಾ.ಶರಣ ನಾಯಕ, ಡಾ.ಲಾವಣ್ಯ.ಸಿ.ಈ, ವೀಣಾ.ಎನ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.