ಮಲೆನಾಡು ಪ್ರದೇಶಾಭಿವೃದ್ದಿ ಮಂಡಳಿಯ ಶಾಸಕ ಸದಸ್ಯರುಗಳಿಗೆ ತಮ್ಮ ಕ್ಷೇತ್ರದ ಅಭಿವೃದ್ದಿಗಾಗಿ ತಲಾ ರೂ.1.00 ಕೋಟಿಯಂತೆ 2022-23 ನೇ ಸಾಲಿಗೆ ಕ್ರಿಯಾ ಯೋಜನೆ ರೂಪಿಸಲು ಅನುದಾನ ಬಿಡುಗಡೆ ಮಾಡುವಂತೆ ಸಚಿವರು, ಸಂಸದರು ಮತ್ತು ಶಾಸಕರ ನಿಯೋಗದೊಂದಿಗೆ ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿವರನ್ನು ಮೇ.19 ರಂದು ಭೇಟಿ ಮಾಡಿ ಕೋರಲಾಗಿದೆ ಎಂದು ಮಲೆನಾಡು ಪ್ರದೇಶ ಅಭಿವೃದ್ದಿ ಮಂಡಳಿ ಅಧ್ಯಕ್ಷರಾದ ಕೆ.ಎಸ್.ಗುರುಮೂರ್ತಿ ತಿಳಿಸಿದ್ದಾರೆ.
ನಿಯೋಗದಲ್ಲಿ ಗೃಹ ಸಚಿವರಾದ ಆರಗ ಜ್ಞಾನೇಂದ್ರ, ಸಂಸದರಾದ ಬಿ.ವೈ.ರಾಘವೇಂದ್ರ, ಶಾಸಕರಾದ ಕೆ.ಬಿ.ಅಶೋಕನಾಯ್ಕ್, ಹರತಾಳು ಹಾಲಪ್ಪ, ಕುಮಾರ ಬಂಗಾರಪ್ಪ, ಡಿ.ಎಸ್.ಅರುಣ್, ಆಯನೂರು ಮಂಜುನಾಥ, ಎಸ್.ರುದ್ರೇಗೌಡರು ಹಾಗೂ ಮಲೆನಾಡು ಪ್ರದೇಶಾಭಿವೃದ್ದಿ ಪ್ರದೇಶ ಮಂಡಳಿ ಅಧ್ಯಕ್ಷರಾದ ಕೆ.ಎಸ್.ಗುರುಮೂರ್ತಿ ಇದ್ದರು.
ಮಾನ್ಯ ಮುಖ್ಯಮಂತ್ರಿಗಳು ಈ ಕುರಿತು ಪರಿಶೀಲಿಸಿ ಒಂದು ವಾರದ ಒಳಗಾಗಿ ಆದೇಶ ಹೊರಡಿಸುತ್ತೇನೆ ಎಂಬ ಭರವಸೆ ನೀಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.