ಶಿವಮೊಗ್ಗ ನಗರಕ್ಕೆ ಆಗಮಿಸಿದ ಕರ್ನಾಟಕದ ರಾಜ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಯವರಿಗೆ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಆತ್ಮೀಯವಾಗಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಮಾನ್ಯ ಮುಖ್ಯಮಂತ್ರಿಯವರ ಗಮನಕ್ಕೆ ಸಂಘದ ವತಿಯಿಂದ ಜಿಲ್ಲೆಯ ಪ್ರಗತಿಯ ಬಗ್ಗೆ ತಿಳಿಸಲಾಯಿತು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಮಾತನಾಡುತ್ತಾ ಈಗಾಗಲೇ ಶಿವಮೊಗ್ಗಕ್ಕೆ ಹಲವಾರು ಯೋಜನೆಗಳನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮುಖಾಂತರವಾಗಿ ತಮ್ಮ ನಗರಕ್ಕೆ ನೀಡಿದ್ದೇವೆ ಇಡೀ ಕರ್ನಾಟಕದಲ್ಲಿ ಶಿವಮೊಗ್ಗ ಮುಂದಿನ ದಿನಗಳಲ್ಲಿ ನಂಬರ್ ಒನ್ ಸ್ಥಾನಕ್ಕೆ ಬರಲಿದೆ ಎನ್ನುವ ವಿಶ್ವಾಸವನ್ನು ಮಾನ್ಯ ಮುಖ್ಯಮಂತ್ರಿಗಳು ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷರಾದ ಎನ್ ಗೋಪಿನಾಥ್ ಕಾರ್ಯದರ್ಶಿ ವಸಂತ ಹೋಬಳಿದಾರ್ ಉಪಾಧ್ಯಕ್ಷರಾದ ಗೋಪಿನಾಥ್ ಹಿರಿಯರಾದ ಅಶ್ವಥ್ ನಾರಾಯಣಶೆಟ್ಟಿ ಭಾರದ್ವಾಜ್ ಸಹಕಾರ್ಯದರ್ಶಿ ವಿಜಯಕುಮಾರ್.
ನಿರ್ದೇಶಕರಾದ ಸಂತೋಷ್, ಪರಮೇಶ್, ಗಣೇಶ್ ಅಂಗಡಿ ಮತ್ತು ಮಾಜಿ ಅಧ್ಯಕ್ಷರಾದ ಹಾಗೂ ಹಾಲಿ ವಿಧಾನ ಪರಿಷತ್ ಸದಸ್ಯರಾದ ಡಿ ಎಸ್ ಅರುಣ್, ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕಾ ನಿಗಮದ ರಾಜ್ಯ ಉಪಾಧ್ಯಕ್ಷರಾದ ದತ್ತಾತ್ರಿ ಮುಂತಾದವರು ಉಪಸ್ಥಿತರಿದ್ದರು.