ಶಿವಮೊಗ್ಗ ಗ್ರಾಮಾಂತರ ವ್ಯಾಪ್ತಿಯ ಅಬ್ಬಲಗೆರೆ ಗ್ರಾಮ ಪಂಚಾಯತಿಯ ಆವರಣದಲ್ಲಿ ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಕೆ.ಬಿ. ಅಶೋಕ ನಾಯ್ಕರವರು ನೂತನ ಸಮುದಾಯ ಭವನದ ಭೂಮಿ ಪೂಜೆಯನ್ನು ನೆರವೇರಿಸಿದರು.

ಸಹ್ಯಾದ್ರಿ ನಾರಾಯಣ ಹೃದಯಾಲಯದ ವತಿಯಿಂದ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣೆ ಶಿಬಿರ, ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ, ಹಾಗೂ ಸಮುದಾಯ ಭವನದ ಭೂಮಿ ಪೂಜಾ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರಾದ ಬೈರನಕೊಪ್ಪ ರಮೇಶ್, ಹಾರನಹಳ್ಳಿ ಕಿರಣ್, ಗ್ರಾಮ ಪಂಚಾಯತಿ ಚುನಾಯಿತ ಪ್ರತಿನಿಧಿಗಳು ಮುಂತಾದವರು ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ…