ಕನ್ನಡ ಸಾಹಿತಿ ಪರಿಷತ್ 2021-22ನೇ ಸಾಲಿನಲ್ಲಿ ನಡೆಸಿದ ಕನ್ನಡ ಪ್ರವೇಶ, ಕಾವ, ಜಾಣ ಮತ್ತು ರತ್ನ ಪರೀಕ್ಷೆಗಳ ಫಲಿತಾಂಶವನ್ನು ರಾಜ್ಯದ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಕಟಣಾ ಫಲಕದಲ್ಲಿ ಪ್ರಕಟಿಸಲಾಗಿದೆ. ಅಂತರ್ಜಾಲ www.kasapa.in ದಲ್ಲೂ ಫಲಿತಾಂಶವನ್ನು ಪ್ರಕಟಿಸಲಾಗಿದೆ.

ಅಂಕಪಟ್ಟಿ ಮತ್ತು ಪ್ರಮಾಣ ಪತ್ರಗಳನ್ನು ಶೀಘ್ರದಲ್ಲೆ ಎಲ್ಲಾ ಅಭ್ಯರ್ಥಿಗಳಿಗೆ ಕಳುಹಿಸಲಾಗುವುದು. ಮರುಮೌಲ್ಯಮಾಪನದ ಹಾಗೂ ಮರು ಎಣಿಕೆಗೆ ಅಂಕಪಟ್ಟಿಗಳನ್ನು ಕಳುಹಿಸಿದ ದಿನಾಂಕದಿಂದ ಒಂದು ತಿಂಗಳ ಅವಧಿಯೊಳಗೆ ಅರ್ಜಿ ಸಲ್ಲಿಸಬೇಕೆಂದು ಪರಿಷತ್ ಗೌರವ ಕಾರ್ಯದರ್ಶಿ ನೇ.ಭ. ರಾಮಲಿಂಗ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಗೌರವ ಕಾರ್ಯದರ್ಶಿಗಳು, ಕನ್ನಡ ಸಾಹಿತ್ಯ ಪರಿಷತ್ತು, ದೂ.ಸಂ.: 080- 26623584 ಇವರನ್ನು ಸಂಪರ್ಕಿಸುವುದು.

ವರದಿ ಮಂಜುನಾಥ್ ಶೆಟ್ಟಿ…