ಶಿವಮೊಗ್ಗ: ಪಿಎಸ್ಐ ಹಾಗೂ ಪ್ರಾಧ್ಯಾಪಕರ ಹುದ್ದೆ ನೇಮಕಾತಿ ಪರೀಕ್ಷೆಯಲ್ಲಿ ಆಗಿರುವ ಅಕ್ರಮವನ್ನು ಪಾರದರ್ಶವಾಗಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಇಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ಪೊಲೀಸ್ ನೇಮಕಾತಿ ಪರೀಕ್ಷೆಯಲ್ಲಿ ಹಾಗೂ 1242 ಸಹಾಯಕ ಪ್ರಾಧ್ಯಾಪಕರ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಪರೀಕ್ಷೆ ಅಕ್ರಮದಿಂದ ಕೂಡಿದ್ದು, ಇದರಿಂದ ಬಡ ಮತತ್ಉ ಪ್ರತಿಭಾವಂತ ಉದ್ಯೋಗಾಕಾಂಕ್ಷಿಗಳಿಗೆ ಅನ್ಯಾಯವಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು, ಭ್ರಷ್ಟಾಚಾರ ನಡೆದಿದೆ. ತಕ್ಷಣವೇ ಸರ್ಕಾರ ಈ ವಿಷಯವನ್ನು ಗಂಭೀರವಾಗಿ ತೆಗೆದುಕೊಂಡು ಪಾರದರ್ಶಕ ತನಿಖೆ ನಡೆಸಬೇಕೆಂದು ಮನವಿಯಲ್ಲಿ ತಿಳಿಸಲಾಗಿದೆ.

ಪರೀಕ್ಷೆ ನಡೆದಾಗಲೇ ಅಕ್ರಮದ ಸುಳಿವು ಸಿಕ್ಕಿದ್ದರೂ ಕೂಡ ಪರೀಕ್ಷಾ ಪ್ರಾಧಿಕಾರ ಕ್ರಮ ತೆಗೆದುಕೊಂಡಿಲ್ಲ. ಈ ಅಕ್ರಮದಲ್ಲಿ ಭಾಗಿಯಾಗಿರುವ ಸರ್ಕಾರಿ ಅಧಿಕಾರಿಗಳು, ಪೊಲೀಸ್ ಇಲಾಖೆ ವ್ಯಕ್ತಿಗಳು, ಕೆಲವು ಪ್ರಾಧ್ಯಾಪಕರು ಹಾಗೂ ರಾಜಕೀಯ ವ್ಯಕ್ತಿಗಳ ಕೈವಾಡವಿದ್ದು, ಇಂತಹ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಬಂಧಿಸಿ ಅವರಿಗೆ ಸೇರಿದ ಎಲ್ಲಾ ಆಸ್ತಿಗಳನ್ನು ಮುಟ್ಟುಗೋಲು ಹಾಕಬೇಕು. ತುರ್ತು ವಿಚಾರಣೆಗಾಗಿ ವಿಶೇಷ ಅಧಿಕಾರಿಗಳನ್ನು ನೇಮಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.ಈ ಸಂದರ್ಭದಲ್ಲಿ ಎಬಿವಿಪಿಯ ಮಹಾನಗರ ಕಾರ್ಯದರ್ಶಿ ಪ್ರವೀಣ್ ಹೆಚ್.ಕೆ. ಮೊದಲಾದವರು ಇದ್ದರು.

ವರದಿ ಮಂಜುನಾಥ್ ಶೆಟ್ಟಿ…