ಕಾರ್ಮಿಕ ದಿನಾಚರಣೆಯ ಪ್ರಯುಕ್ತ ಶಿವಮೊಗ್ಗ ಜಿಲ್ಲಾ ಜಾತ್ಯತೀತ ಜನತಾದಳ ಕಾರ್ಮಿಕ ವಿಭಾಗದ ಅಧ್ಯಕ್ಷರಾದ ಶ್ಯಾಮ್. ಡಿ. ಅವರ ನೇತೃತ್ವದಲ್ಲಿ ನೆಹರೂ ರಸ್ತೆಯ ಪಕ್ಷದ ಕಚೇರಿಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿರುವಂತಹ ಹಿರಿಯ ಕಾರ್ಮಿಕರಿಗೆ ಗೌರವ ಸಮರ್ಪಣೆ ಹಾಗೂ ಸನ್ಮಾನ ಕಾರ್ಯಕ್ರಮವನ್ನು ಮಾಡಲಾಯಿತು.
ಈ ಸಂದರ್ಭದಲ್ಲಿ ಕಾರ್ಮಿಕರ ಅಮೂಲ್ಯ ಸೇವೆಯನ್ನು ಸ್ಮರಿಸಲಾಯಿತು ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಜಿಲ್ಲಾ ಜೆಡಿಎಸ್ ಮುಖಂಡರಾದ ಸಿದ್ದಪ್ಪ ನರಸಿಂಹ ಗಂಧದಮನೆ ವಿನಯ್ ಬಿ ಎಸ್ ಬಸವರಾಜ್ ದಿನೇಶ್ ಹಾಗೂ ಇತರರು ಉಪಸ್ಥಿತರಿದ್ದರು.