ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಮತ್ತು ಮಾಚೇನಹಳ್ಳಿ ಕೈಗಾರಿಕಾ ವಸಹಾತು ಸಂಘದ ಪದಾಧಿಕಾರಿಗಳು ಇಂದು ಬೆಳಿಗ್ಗೆ ಮಾನ್ಯ ಜಿಲ್ಲಾಧಿಕಾರಿಗಳನ್ನು ಹಾಗೂ ತಾಲ್ಲೂಕು ದಂಡಾಧಿಕಾರಿಗಳನ್ನು ಭೇಟಿಯಾಗಿ ಮಾಚೇನಹಳ್ಳಿ ಕೈಗಾರಿಕಾ ವಸಹಾತು ಪ್ರದೇಶದಲ್ಲಿ ರಾಶಿರಾಶಿಯಾಗಿ ಬಿದ್ದಿರುವ ಘನ-ತ್ಯಾಜ್ಯ ವಸ್ತುಗಳಿಂದ ಪರಿಸರದ ಮೇಲೆ ಆಗುತ್ತಿರುವ ದುಷ್ಪರಿಣಾಮ ಮತ್ತು ಕೈಗಾರಿಕಾ ಘನ-ತ್ಯಾಜ್ಯವಸ್ತುಗಳ ವಿಲೇವಾರಿ ಸಂಬಂಧ ಮಾನ್ಯ ಜಿಲ್ಲಾಧಿಕಾರಿಗಳನ್ನು ಬೇಟಿಯಾಗಿ ವಿವರಣೆಯೊಂದಿಗೆ ಚರ್ಚಿಸಿ ಮನವಿ ಸಲ್ಲಿಸಲಾಯಿತು.
ಅದಕ್ಕೆ ಸ್ಪಂದಿಸಿದ ಮಾನ್ಯ ಜಿಲ್ಲಾಧಿಕಾರಿಗಳು ಉಪಯೋಗವಾಗದಿರುವ ಕ್ವಾರಿ ಜಾಗವನ್ನು ಗುರುತಿಸಿ ಕೈಗಾರಿಕಾ ಘನ-ತ್ಯಾಜ್ಯ ವಿಲೇವಾರಿಗೆ ಸೂಕ್ತ ಜಾಗವನ್ನು ಕೊಡಲು ಕ್ರಮಕೈಗೊಳ್ಳುವುದಾಗಿ ಸಮ್ಮತಿಸಿದರು.
ಬೇಟಿ ನೀಯೋಗದ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷರಾದ ಶ್ರೀ ಎನ್. ಗೋಪಿನಾಥ್‍ರವರು ವಹಿಸಿದ್ದು, ಮಾಚೇನಹಳ್ಳಿ ಕೈಗಾರಿಕಾ ವಸಹಾತು ಸಂಘದ ಅಧ್ಯಕ್ಷರಾದ ಎಂ.ಎ. ರಮೇಶ್ ಹೆಗಡೆ, ಕೈಗಾರಿಕಾಭಿವೃದ್ದಿ ಸಲಹಾ ಸಮಿತಿ ಛೇರ್ಮನ್ ಎಂ. ರಾಜು, ಸಹ-ಕಾರ್ಯದರ್ಶಿ ಜಿ. ವಿಜಯಕುಮಾರ್, ನಿರ್ದೇಶಕರಾದ ಪ್ರದೀಪ್ ವಿ. ಯೆಲಿ ಮುಂತಾದವರು ಉಪಸ್ಥಿತರಿದ್ದರು.