ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ, ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ, ಕರ್ನಾಟಕ ತಾಂತ್ರಿಕ ಸಲಹಾ ಸೇವಾ ಸಂಸ್ಥೆ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಭಾಂಗಣದಲ್ಲಿ ಹೊಸ ಕೈಗಾರಿಕಾ ನೀತಿ 2020 -25 ಅರಿವು ಮೂಡಿಸುವ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.
ವಿಧಾನ ಪರಿಷತ್ ಸದಸ್ಯ ಎಸ್. ರುದ್ರೇಗೌಡ ಅಧ್ಯಕ್ಷತೆ ವಹಿಸಿದ್ದರು. ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್, ಡಿ.ಎಸ್. ಅರುಣ್ ಉದ್ಘಾಟನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಎಸ್. ದತ್ತಾತ್ರಿ, ಗೋಪಿನಾಥ್ , ವಿಜಯಕುಮಾರ್ ಮುಂತಾದವರು ಉಪಸ್ಥಿತರಿದ್ದರು.