ಶಿವಮೊಗ್ಗದ ಕಟೀಲ್ ಅಶೋಕ್ ಪೈ ಕಾಲೇಜಿನಲ್ಲಿ ಸಹ್ಯಾದ್ರಿ ಕೋಚಿಂಗ್ ಅಕಾಡೆಮಿ ವತಿಯಿಂದ ಪಿಯು ವಿದ್ಯಾರ್ಥಿಗಳಿಗೆ ಸಿಇಟಿ ಮತ್ತು ನೀಟ್ ತರಬೇತಿ ಕಾರ್ಯಗಾರದ ಉದ್ಘಾಟನಾ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಟೀಲ್ ಅಶೋಕ್ ಪೈ ಕಾಲೇಜಿನ ಪ್ರಾಂಶುಪಾಲರಾದ ಡಾ. ಸಂಧ್ಯಾ ಕಾವೇರಿ ರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಇಂದು ನಾವೆಲ್ಲರೂ ಸ್ಪರ್ಧಾತ್ಮಕ ಯುಗದಲ್ಲಿ ವಾಸಿಸುತ್ತಿದ್ದೇವೆ ಮತ್ತು ನಮ್ಮ ಬದುಕನ್ನು ರೂಪಿಸಿಕೊಳ್ಳಲು ಆ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವುದು ಅನಿವಾರ್ಯವೂ ಹೌದು ಎಂದು ಹೇಳಿದರು. ಅಲ್ಲದೆ ಎಲ್ಲಾ ಸಾಧನೆಗಿಂತ ಮನಸ್ಸನ್ನು ಸಕಾರಾತ್ಮಕವಾಗಿ ಹಿಡಿದಿಟ್ಟುಕೊಳ್ಳುವುದು ಬಹಳ ಮುಖ್ಯ ಮತ್ತು ನಮ್ಮ ಮನಸ್ಸನ್ನು ನಿಯಂತ್ರಣದಲ್ಲಿಟ್ಟುಕೊಂಡು ನಮ್ಮ ಸಾಧನೆಯ ಕಡೆಗೆ ಸಾಗಿದರೆ ಯಶಸ್ಸು ಖಂಡಿತ ಲಭಿಸುತ್ತದೆ ಎಂದು ಹೇಳಿದರು. ನಮ್ಮ ಮನಸ್ಸಿಗೆ ಮತ್ತು ನಮ್ಮ ದೈಹಿಕ ಆರೋಗ್ಯಕ್ಕೆ ಯಾವುದು ಅಡಚಣೆಯಾಗುತ್ತದೆ ಅಂತಹ ವಿಷಯಗಳಿಂದ ದೂರವಿರಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ವೇದಿಕೆಯಲ್ಲಿ ಸಹ್ಯಾದ್ರಿ ಕೋಚಿಂಗ್ ಅಕಾಡೆಮಿ ಮುಖ್ಯಸ್ಥರಾದ ಶ್ರೀಯುತ ಪ್ರಕಾಶ್ ರವರು ಉಪಸ್ಥಿತರಿದ್ದರು.

ಉಪನ್ಯಾಸಕರಾದ ಶ್ರೀಯುತ ಪರಮೇಶ್ ರವರು ವೇದಿಕೆಯಲ್ಲಿದ್ದರು. ಕಸ್ತೂರಬಾ ಬಾಲಿಕಾ ಪದವಿ ಪೂರ್ವ ಕಾಲೇಜು ಮತ್ತು ಅಕ್ಷರಧಾಮ ಪದವಿ ಪೂರ್ವ ಕಾಲೇಜಿನ ಗಣಿತಶಾಸ್ತ್ರ ಉಪನ್ಯಾಸಕರಾದ ಶ್ರೀ ದೀಪಕ್ ಎಸ್ ಪಿ ಇವರು ವಿದ್ಯಾರ್ಥಿಗಳಿಗೆ ರೂಪಿಸಿದ ಹ್ಯಾಂಡ್ ಬುಕ್ ಅನ್ನು ಲೋಕಾರ್ಪಣೆ ಮಾಡಲಾಯಿತು. ಕಸ್ತೂರಬಾ ಬಾಲಿಕ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ವಾಹಿನಿ ಕಾರ್ಯಕ್ರಮದಲ್ಲಿ ಪ್ರಾರ್ಥಿಸಿ ಎಲ್ಲರಿಗೂ ವಂದಿಸಿದಳು. ಎಚ್ಎಸ್ ರುದ್ರಪ್ಪ ರಾಷ್ಟ್ರೀಯ ಪದವಿ ಪೂರ್ವ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕರಾದ ಡಾ. ಸಂತೋಷ್ ಹೆಚ್ ಕಾರ್ಯಕ್ರಮವನ್ನು ನಿರೂಪಿಸಿದರು .

ವರದಿ ಮಂಜುನಾಥ್ ಶೆಟ್ಟಿ…