ಶಿವಮೊಗ್ಗ: ಮುಸಲ್ಮಾನರ ಮನಸ್ಥಿತಿ ಬದಲಾಗಬೇಕು. ಅವರು ಈ ದೇಶದ ಸಂವಿಧಾನ ಮತ್ತು ಕಾನೂನು ಹಾಗೂ ಸಂಸ್ಕೃತಿ ಗೌರವಿಸಬೇಕು ಎಂದು ಶಾಸಕ ಕೆ.ಎಸ್. ಈಶ್ವರಪ್ಪ ಹೇಳಿದರು.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳೂರಿನಲ್ಲಿ ಮತ್ತೆ ಹಿಜಾಬ್ ವಿವಾದ ಭುಗಿಲೆದ್ದ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಹಿಜಾಬ್ ಈಗ ಮುಗಿದ ಅಧ್ಯಾಯ. ನ್ಯಾಯಾಲಯ ಈಗಾಗಲೇ ಸ್ಪಷ್ಠೀಕರಣ ನೀಡಿದೆ. ಕೆಲವು ರಾಷ್ಟ್ರದ್ರೋಹಿ ಶಕ್ತಿಗಳ ಚಿತಾವಣೆಯಿಂದ ಈ ರೀತಿಯ ವರ್ತನೆಗಳು ಪುನರಾವರ್ತನೆಯಾಗುತ್ತಿವೆ ಎಂದರು.ಮುಸಲ್ಮಾನರು ಭಾರತೀಯ ಸಂಸ್ಕೃತಿಗೆ ಹೊಂದಾಣಿಕೆ ಮಾಡಿಕೊಂಡು ತಮ್ಮ ಮನಸ್ಥಿತಿಯನ್ನು ಬದಲಾಯಿಸಿಕೊಳ್ಳಬೇಕು. ಈ ದೇಶದಲ್ಲಿರಬೇಕಾದರೆ ದೇಶದ ಸಂವಿಧಾನ ಮತತ್ಉ ಕಾನೂನನ್ನು ಗೌರವಿಸಬೇಕು. ಈ ವಿದ್ಯಾರ್ಥಿಗಳ ಹಿಂದಿರುವ ರಾಷ್ಟ್ರದ್ರೋಹಿ ಶಕ್ತಿಗಳನ್ನು ಹೆಕ್ಕಿ ತೆಗೆಯುವ ಕೆಲಸ ಸರ್ಕಾರ ಮಾಡುತ್ತಿದೆ.
ವಿದ್ಯಾರ್ಥಿಗಳು ರಾಷ್ಟ್ರದ ಸತ್ಪ್ರಜೆಗಳಾಗಿ ವಿಧ್ಯಾಭ್ಯಾಸದ ಕಡೆಗೆ ಗಮನಕೊಡಬೇಕು ಎಂದರು.ಕೋರ್ಟ್ ಆದೇಶ ಉಲ್ಲಂಘಿಸಿದ ವಿದ್ಯಾರ್ಥಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳುವ ಪ್ರಶ್ನೆ ಇಲ್ಲ. ಆದರೆ, ಅವರ ಹಿಂದಿರುವ ಶಕ್ತಿಗಳನ್ನು ಗುರುತಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.ರೈತ ನಾಯಕ ಕೋಡಿಹಳ್ಳಿ ಚಂದ್ರಶೇಖರ್ ಅವರ ಮೇಲೆ ಸಾರಿಗೆ ನೌಕರರ ಪ್ರತಿಭಟನೆ ಸಂದರ್ಭದಲ್ಲಿ ಪ್ರತಿಭಟನೆ ಹಿಂಪಡೆಯಲು 35 ಕೋಟಿ ರೂ. ಬೇಡಿಕೆ ಇಟ್ಟಿದ್ದಾರೆ ಎಂಬ ವಿಡಿಯೋ ವೈರಲ್ ಆಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಇದಕ್ಕೆ ಕೋಡಿಹಳ್ಳಿ ಅವರೇ ಸ್ಪಷ್ಠೀಕರಣ ನೀಡಬೇಕು. ದುಡ್ಡಿನ ಆಸೆಗೆ ಇಳಿದರೆ ರೈತರ ಮತ್ತು ಕಾರ್ಮಿಕರ ಕತೆ ಏನಾಗಬಹುದು. ಅವರ ಪಾತ್ರದ ಬಗ್ಗೆ ಕೋಡಿಹಳ್ಳಿ ಅವರೇ ಸ್ಪಷ್ಠೀಕರಣ ನೀಡಲಿ ಎಂದರು.