ಬೆಂಗಳೂರಿನಲ್ಲಿ ನಡೆದ ಲಘು ಉದ್ಯೋಗ ಭಾರತಿ ಬೆಂಗಳೂರು ನಾರ್ಥ್ ಕರ್ನಾಟಕ ವತಿಯಿಂದ ನಡೆದ ಎಂಎಸ್ಎಂಇ -2022 ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕೈಗಾರಿಕಾ ಕ್ಷೇತ್ರದ ಜೀವಮಾನ ಶ್ರೇಷ್ಠ ಸಾಧನೆಗೆ ವಿಧಾನ ಪರಿಷತ್ ಸದಸ್್ಯ ಹಾಗೂ ಖ್ಯಾತ ಕೈಗಾರಿಕೋದ್ಯಮಿ ಎಸ್. ರುದ್ರೇಗೌಡ ಅವರನ್ನು ಸನ್ಮಾನಿಸಲಾಯಿತು.
ಬೆಂಗಳೂರಿನ ಹೋಟೆಲ್ ಶೇರ್ ಟಾನ್ ಬ್ರಿಗೇಡ್ ಬೆಂಗಳೂರು ಇಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬೃಹತ್ ಕೈಗಾರಿಕ ಸಚಿವ ಮುರುಗೇಶ ನಿರಾಣಿ, ಲಘು ಉದ್ಯೋಗ ಭಾರತಿ ಸಂಸ್ಥೆಯ ಮುಖ್ಯಸ್ಥರು, ಪ್ರಮುಖರು ಮತ್ತು ಪದಾಧಿಕಾರಿಗಳು ಮತ್ತು ಕೈಗಾರಿಕಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಹಲವು ಪ್ರಮುಖರು ಉಪಸ್ಥಿತರಿದ್ದರು.