ಶಿವಮೊಗ್ಗ: ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸುಬ್ಬಯ್ಯ ವೈದ್ಯಕೀಯ ಮತ್ತು ದಂತವೈದ್ಯಕೀಯ ಕಾಲೇಜ್, ಜಿಲ್ಲಾ ಮೆಗ್ಗಾನ್ ಬೋಧನಾ ಆಸ್ಪತ್ರೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಭಾರತೀಯ ವೈದ್ಯಕೀಯ ಸಂಘದ ಸಂಯುಕ್ತಾಶ್ರಯದಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ ಅಂಗವಾಗಿ ಜಾಥಾ ಹಮ್ಮಿಕೊಳ್ಳಲಾಗಿತ್ತು.
ಜಿಲ್ಲಾ ನ್ಯಾಯಾಲಯ ಆವರಣದಿಂದ ಐಎಂಎ ಹಾಲ್ ವರೆಗೆ ಜಾಥಾ ನಡೆಯಿತು. ತಂಬಾಕು ಪರಿಸರಕ್ಕೆ ಮಾರಕ ಎಂಬ ಘೋಷ ವಾಕ್ಯದೊಂದಿಗೆ ಹಮ್ಮಿಕೊಂಡಿದ್ದ ಜಾಥಾವನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಸ್.ಎ. ಮುಸ್ತಾಫ ಹುಸೇನ್ ಉದ್ಘಾಟಿಸಿದರು. ಗೋಪಿ ವೃತ್ತದಲ್ಲಿ ಜಾಥಾದಲ್ಲಿ ಭಾಗವಹಿಸಿದ್ದ ಎಲ್ಲರಿಗೂ ಪ್ರಮಾಣವಚನ ಬೋಧಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ, ಡಿಹೆಚ್ಒ ಡಾ. ರಾಜೇಶ್ ಸುರಗಿಹಳ್ಳಿ, ಹಿರಿಯ ಸಿವಿಲ್ ನ್ಯಾಯಾಧೀಶ ರಾಜಣ್ಣ ಸಂಕಣ್ಣನವರ್, ಎಡಿಸಿ ನಾಗೇಂದ್ರ ಎಫ್. ಹೊನ್ನಳ್ಳಿ, ಡಾ. ಸಿದ್ಧನಗೌಡ ಪಾಟೀಲ್, ಡಾ. ಮಲ್ಲಪ್ಪ, ಡಾ. ಕಿರಣ್ ಕುಮಾರ್, ವಕೀಲರ ಸಂಘದ ಅಧ್ಯಕ್ಷ ಬಿ.ಜಿ. ಶಿವಮೂರ್ತಿ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಅಧಿಕಾರಿಗಳು ಉಪಸ್ಥಿತರಿದ್ದರು.