ಭದ್ರಾವತಿ ತಾಲ್ಲೂಕು ಆಡಳಿತದ ವತಿಯಿಂದ ಇಂದು ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 48 ಜನ ಬಗರ್ ಹುಕ್ಕಂ ಸಾಗುವಳಿದಾರರಿಗೆ ಹಕ್ಕು ಪತ್ರ ಮತ್ತು 52 ಜನರಿಗೆ ಸಾಮಾಜಿಕ ಭದ್ರತಾ ಯೋಜನೆಯ ಮಂಜೂರಾತಿ ಪ್ರತಿಯನ್ನು ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಕೆ.ಬಿ ಅಶೋಕ ನಾಯ್ಕ ರವರ ಅಧ್ಯಕ್ಷತೆಯಲ್ಲಿ ವಿಧಾನ ಪರಿಷತ್ ಶಾಸಕರಾದ ಡಿ.ಎಸ್.ಅರುಣ್ ರವರೊಂದಿಗೆ ಕಲ್ಲಿಹಾಳ್ ಗ್ರಾಮದಲ್ಲಿ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಊರಿನ ಗ್ರಾಮಸ್ಥರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.