ಶಿವಮೊಗ್ಗ ನಗರದ ಶಾರದಾ ದೇವಿ ಅಂಧರ ವಿಕಾಸ ಕೇಂದ್ರದ ಮಕ್ಕಳು 2022 ಸಾಲಿನ 10 ನೇ ತರಗತಿಯಲ್ಲಿ ಹೆಚ್ಚು ಅಂಕ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ. ಈ ಶಾಲೆ ಅಂಧ ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿನಿಯರಿಗೆ ನಡೆಸುತ್ತಿರುವ ವಿಶೇಷ ಶಾಲೆಯಾಗಿದೆ.
ಈ ಶಾಲೆಯಲ್ಲಿ ಒಟ್ಟು 15 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.ಈ ಶಾಲೆಯಲ್ಲಿ 1 ರಿಂದ 10 ತರಗತಿವರೆಗೆ ವಿದ್ಯಾರ್ಥಿಗಳಿಗೆ ಉಚಿತ ವಿದ್ಯಾಭ್ಯಾಸದೊಂದಿಗೆ ಊಟ , ವಸತಿ , ಹಾಗೂ ವೈದ್ಯಕೀಯ ಸೌಲಭ್ಯಗಳು ನೀಡುತ್ತಿದ್ದಾರೆ. ಈ ಮಕ್ಕಳಿಗೆ ಶಾಲೆಯ ಆಡಳಿತ ಮಂಡಳಿ ಅಭಿನಂದನೆಗಳು ಸಲ್ಲಿಸಿದ್ದಾರೆ.