ಶಿವಮೊಗ್ಗ: ಸರ್ಜಿ ಫೌಂಡೇಷನ್, ಸೇಂಟ್ ಜೋಸೆಫ್ ಅಕ್ಷರಧಾಮ ಇವರ ಸಂಯಕ್ತಾಶ್ರಯದಲ್ಲಿ ಜೂ. 7 ರಂದು ಸಾಗರ ರಸ್ತೆಯ ಸೇಂಟ್ ಜೋಸೆಫ್ ಅಕ್ಷರಧಾಮ ವಿದ್ಯಾಸಂಸ್ಥೆಯ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಗುವುದು ಸರ್ಜಿ ಫೌಂಡೇಷನ್ ಮ್ಯಾನೇಜಿಂಗ್ ಟ್ರಸ್ಟಿ ಡಾ. ಧನಂಜಯ ಸರ್ಜಿ ಹೇಳಿದರು.

ಅವರು ಇಂದು ಸರ್ಜಿ ಆಸ್ಪತ್ರೆಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಪರಿಸರ ಪ್ರಜ್ಞೆ ಇಂದು ಬಹಳ ಮುಖ್ಯವಾಗಿದೆ. ವಿಶ್ವ ಪರಿಸರ ದಿನಾಚರಣೆಯನ್ನು ವಿಶಿಷ್ಟವಾಗಿ ಆಚರಿಸಬೇಕು ಎಂಬ ಹಿನ್ನಲೆಯಲ್ಲಿ ನಮ್ಮ ಫೌಂಡೇಷನ್ ವತಿಯಿಂದ ನಗರದ ವಿವಿಧ ಶಾಲಾ, ಕಾಲೇಜ್ ವಿದ್ಯಾರ್ಥಿಗಳಿಗಾಗಿ ಚಿತ್ರಕಲಾ, ಪ್ರಬಂಧ ಸ್ಪರ್ಧೆ ಹಮ್ಮಿಕೊಳ್ಳಲಾಗಿತ್ತು. ನಗರದ ಸುಮಾರು 15 ಶಾಲೆಗಳಿಂದ 2200 ಕ್ಕೂ ಹೆಚ್ಚು ಜನ ಭಾಗವಹಿಸಿದ್ದರು. ವಿಜೇತರಿಗೆ ಪ್ರಶಸ್ತಿ ಪತ್ರದೊಂದಿಗೆ ನಗದು ಬಹುಮಾನ ನೀಡಲಾಗುವುದು ಎಂದರು.ಮಕ್ಕಳಿಗೆ ವಿದ್ಯಾರ್ಥಿ ದೆಸೆಯಿಂದಲೇ ಪರಿಸರ ಕಾಳಜಿ, ಭೂಮಿ ರಕ್ಷಣೆ ಬಗ್ಗೆ ಆಸಕ್ತಿ ಮೂಡಿಸುವ ಹಿನ್ನಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ವನಮಹೋತ್ಸವ ಕಾರ್ಯಕ್ರಮ ಕೂಡ ಮಾಡಲಾಗುತ್ತಿದೆ.

ಈ ಕಾರ್ಯಕ್ರಮಕ್ಕೆ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸಾಲುಮರದ ತಿಮ್ಮಕ್ಕ ಅವರು ಆಗಮಿಸುತ್ತಿದ್ದಾರೆ. ಅವರಿಂದಲೇ ಮಕ್ಕಳಿಗೆ ಬಹುಮಾನ ವಿತರಣೆ ಮತ್ತು ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು ಎಂದರು.ಸುಮಾರು 1500 ಕ್ಕೂ ಹೆಚ್ಚು ಮಕ್ಕಳು ಗಿಡ ನೆಡಲಿದ್ದಾರೆ. ಆ ಗಿಡಗಳಿಗೆ ಅವರದೇ ಹೆಸರು ಇಡಲಾಗುತ್ತದೆ. ಅವರು ಅದನ್ನು ಪೋಷಣೆ ಮಾಡುತ್ತಾರೆ ಎಂದರು.ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ, ಡಿಎಫ್ಒ ಶಂಕರ, ಬಸವಕೇಂದ್ರದ ಶ್ರೀ ಬಸವಮರುಳಸಿದ್ಧ ಸ್ವಾಮೀಜಿ,. ಸೇಂಟ್ ಜೋಸೆಫ್ ಶಾಲೆ ಪ್ರಾಂಶುಪಾಲ ಫಾ. ನಿಕ್ಸನ ಮುಂತಾದವರು ಭಾಗವಹಿಸಲಿದ್ದಾರೆ ಎಂದರು.ಪತ್ರಿಕಾಗೋಷ್ಠಿಯಲ್ಲಿ ಸರ್ಜಿ ಫೌಂಡೇಷನ್ ಟ್ರಸ್ಟಿ, ನಮಿತಾ ಸರ್ಜಿ, ಪುರುಷೋತ್ತಮ್, ಅಕ್ಷರಧಾಮ ಶಾಲೆಯ ಪ್ರಾಂಶುಪಾಲ ಫಾ. ನಿಕ್ಸನ, ಸೇಂಟ್ ಥಾಮಸ್ ಸ್ಕೂಲ್ ಪ್ರಾಂಶುಪಾಲ ಫಾ. ವಿನ್ಸೆಂಟ್ ಇದ್ದರು.

ವರದಿ ಮಂಜುನಾಥ್ ಶೆಟ್ಟಿ…