ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 29ರಂದು ಕುಮರಿ ನಾರಾಯಣಪುರ ಗ್ರಾಮದ ಚೌಡಮ್ಮ ದೇವಸ್ಥಾನದ ಬಾಗಿಲಿನ ಬೀಗವನ್ನು ಮುರಿದು ಒಳಗಡೆ ಇದ್ದ ಕಾಣಿಕೆ ಹುಂಡಿಯನ್ನು ಒಡೆದು ಅದರಲ್ಲಿದ್ದ ಅಂದಾಜು ರೂ 20,000 ರಿಂದ 30,000 ನಗದು ಹಣವನ್ನು ಕದ್ದು ಕಳ್ಳರ ಕೈಚಳಕ ತೋರಿಸಿದ್ದಾರೆ.

ನಂತರ ನೀಡಿದ ದೂರಿನ ಮೇರೆಗೆ ಗುನ್ನೆ ಸಂಖ್ಯೆ 0061/2022 ಕಲಂ 457, 380 ಐಪಿಸಿ ರೀತ್ಯ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಪಿಐ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆ ಮತ್ತು ಸಿಬ್ಬಂದಿಗಳ ತಂಡವು ದಿನಾಂಕ 13-06-2022 ರಂದು ಸದರಿ ಪ್ರಕರಣದ ಆರೋಪಿ ಗಳಾದ ವಸಂತರಾಜು @ವಸಂತ, 37 ವರ್ಷ ಹೊಸಮನೆ ಭದ್ರಾವತಿ ಮತ್ತು ಶ್ವೇತಾ @ ಆಸ್ಮಾ, 32 ವರ್ಷ, ಬೇಡರ ಹೊಸಳ್ಳಿ ಶಿವಮೊಗ್ಗ ರವರುಗಳನ್ನು ದಸ್ತಗಿರಿ ಮಾಡಿರುತ್ತಾರೆ.

ಆರೋಪಿತರಿಂದ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯ 01 ದೇವಸ್ಥಾನ ಕಳ್ಳತನ ಪ್ರಕರಣ, ಪೇಪರ್ ಟೌನ್ ಪೊಲೀಸ್ ಠಾಣೆ ಮತ್ತು ಹೊಳೆಹೊನ್ನೂರು ಪೊಲೀಸ್ ಠಾಣೆಯ 2 ಹಗಲು ಮನೆಗಳ್ಳತನ ಪ್ರಕರಣಗಳಿಗೆ ಸಂಬಂಧಿಸಿದ ಅಂದಾಜು ಮೌಲ್ಯ 10,25,000/- ರೂ ಗಳ ಒಟ್ಟು 220 ಗ್ರಾಂ ತೂಕದ ಬಂಗಾರದ ಆಭರಣಗಳು ಮತ್ತು 132 ಗ್ರಾಂ ತೂಕದ ಬೆಳ್ಳಿಯ ಆಭರಣಗಳು ಮತ್ತು ರೂ 5000/- ನಗದು ಹಣವನ್ನು ಅಮಾನತ್ತುಪಡಿಸಿ ಕೊಂಡಿರುತ್ತಾರೆ.

ವರದಿ ಮಂಜುನಾಥ್ ಶೆಟ್ಟಿ…