ಶಿವಮೊಗ್ಗ : ಇಂದು ಶಿವಮೊಗ್ಗದ ಮಾಚೇನಹಳ್ಳಿಯ ಪೊಲೀಸ್ ಬೆಟಾಲಿಯನ್‌ನಲ್ಲಿ ನೆಹರೂ ಯುವ ಕೇಂದ್ರ ಮತ್ತು ಕರ್ನಾಟಕ ರಾಜ್ಯ ಪೊಲೀಸ್ ಮೀಸಲು ಪಡೆ, ಡೆಕತ್ಲಾನ್, ರಾಜ್ಯ ನಾಗರೀಕ ರಕ್ಷಣಾ ಸಮಿತಿ ಮತ್ತು ಶಿವಮೊಗ್ಗ ಸಿಟಿ ಕರಾಟೆ ಅಸೋಸಿಯೇಷನ್ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಆಯುಷ್ ಇಲಾಖೆಯ ಯೋಗ ತರಬೇತಿದಾರ ಮಹೇಂದ್ರರವರು ಪೊಲೀಸ್ ಸಿಬ್ಬಂದಿಗಳಿಗೆ ಯೋಗ ತರಬೇತಿಯನ್ನು ನೀಡಿದರು. ಈ ಸಂದರ್ಭದಲ್ಲಿ ಬೆಟಾಲಿಯನ್‌ನ ಅಸಿಸ್ಟೆಂಟ್ ಕಮ್ಯಾಂಡೆಂಟ್ ಅಣಜಿ ಮಂಜುನಾಥ್ ಮತ್ತು ನೆಹರೂ ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ಉಲ್ಲಾಸ್, ರಾಜ್ಯ ನಾಗರೀಕ ರಕ್ಷಣಾ ಸಮಿತಿ ರಾಜ್ಯ ಕಾರ್ಯದರ್ಶಿ ರಾಘವೇಂದ್ರ ಆರ್, ಮತ್ತು ಕರಾಟೆ ಅಸೋಸಿಯೇಷನ್‌ನ ವಿನೋದ್, ಡೆಕತ್‌ಲಾನ್‌ನ ಪ್ರದೀಪ್ ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ…