ಮುಖ್ಯಮಂತ್ರಿಗಳಾದ ಸನ್ಮಾನ್ಯ ಬಿ.ಎಸ್. ಯಡಿಯೂರಪ್ಪನವರ ನೇತೃತ್ವದಲ್ಲಿ ರಾಜ್ಯ ಬಿಜೆಪಿ ಸರ್ಕಾರವು ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ ಪ್ರತಿವರ್ಷ ಟ್ಯಾಬ್ಲೆಟ್ ಕಂಪ್ಯೂಟರ್ ವಿತರಿಸಿದರು .ಹಾಗೆಯೇ ಈ ವರ್ಷವೂ ಸಹ ಗ್ರಾಮಾಂತರ ಶಾಸಕರಾದ ಶ್ರೀ ಕೆ ವಿ ಅಶೋಕ್ ನಾಯ್ಕ ರವರು ಆಯನೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಟ್ಯಾಬ್ಲೆಟ್ ಕಂಪ್ಯೂಟರ್ ಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಿದರು. ಈ ಸಂದರ್ಭದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಮಂಜುನಾಥ ಶೆಟ್ಟಿ ರವರು, ಪ್ರಾಂಶುಪಾಲರಾದ ಡಾ.ರಾಮಚಂದ್ರ ರವರು, ಕುಂಸಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ತಮ್ಮಡಿಹಳ್ಳಿ ನಾಗರಾಜ್ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರು, ಪ್ರಾಧ್ಯಾಪಕರು,ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವರದಿ ಮಂಜುನಾಥಶೆಟ್ಟಿ ಶಿವಮೊಗ್ಗ

CCTV SALES & SERVICE

9880074684

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153