ಭದ್ರಾವತಿ ಗ್ರಾಮಾಂತರ ವ್ಯಾಪ್ತಿಯಲ್ಲಿ 6 ವರ್ಷದ ಬಾಲಕಿಯ ಮೇಲೆ ಲೈಂಗಿಕ ಎಸಗಿದ್ದಾನೆ ಎಂಬ ಆರೋಪದ ಮೇಲೆ ಆರೋಪಿ ಲಿಂಗರಾಜುಗೆ 20 ವರ್ಷ ಜೈಲು ಶಿಕ್ಷೆ ನೀಡಿ ಆದೇಶ ಹೊರಡಿಸಿದ್ದಾರೆ.

ದಿನಾಂಕಃ- 10-02-2019 ರಂದು ಬೆಳಗ್ಗೆ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರ ವಾಸಿಯಾದ ಲಿಂಗರಾಜ @ ನವೀನ 18 ವರ್ಷ ಈತನು 06 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಯು ತನ್ನ ಮನೆಯ ಮುಂದೆ ಆಟವಾಡುತ್ತಿದ್ದಾಗ, ಚಾಕಲೇಟ್ ಕೊಡುತ್ತೇನೆಂದು ಕರೆದುಕೊಂಡು ಹೋಗಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುತ್ತಾನೆಂದು ನೀಡಿದ ದೂರಿನ ಮೇರೆಗೆ ಪೋಕ್ಸೋ ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಿಕೊಳ್ಳಲಾಗಿರುತ್ತದೆ.

ತನಿಖಾಧಿಕಾರಿಗಳಾದ ಶ್ರೀ ಯೋಗೇಶ್, ಸಿಪಿಐ ಭದ್ರಾವತಿ ಗ್ರಾಮಾಂತರ ವೃತ್ತ ರವರು ಸದರಿ ಪ್ರಕರಣದ ತನಿಖೆಯನ್ನು ಕೈಗೊಂಡು ಆರೋಪಿ ಲಿಂಗರಾಜ @ ನವೀನ 18 ವರ್ಷ ಈತನ ವಿರುದ್ಧ ಘನ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರವನ್ನು ಸಲ್ಲಿಸಿರುತ್ತಾರೆ.

ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕರಾದ ಶ್ರೀ ಹರಿಪ್ರಸಾದ್ ರವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದು, ಮಾನ್ಯ Addl District and Sessions Judge, FTSC–II (POCSO) Shivamogga ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದು ಮಾನ್ಯ ನ್ಯಾಯಾಧೀಶರಾದ ಮೋಹನ ಜೆ.ಎಸ್ ರವರು ದಿನಾಂಕ 23-06-2022 ರಂದು ಆರೋಪಿತನ ವಿರುದ್ಧ ಪೋಕ್ಸೋ ಕಾಯ್ದೆ ಅಡಿಯಲ್ಲಿ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ಆರೋಪಿಗೆ 20 ವರ್ಷಗಳ ಕಾಲ ಕಠಿಣ ಕಾರಾಗೃಹ ಶಿಕ್ಷೆ ಮತ್ತು 50,000/- ರೂ ದಂಡ, ದಂಡವನ್ನು ಕಟ್ಟಲು ವಿಫಲನಾದರೆ ಹೆಚ್ಚುವರಿಯಾಗಿ 06 ತಿಂಗಳ ಕಾಲ ಸಾದಾ ಕಾರವಾಸ ಶಿಕ್ಷೆ ನೀಡಿ ಆದೇಶ ನೀಡಿರುತ್ತಾರೆ.

ವರದಿ ಮಂಜುನಾಥ್ ಶೆಟ್ಟಿ…