ಶಿವಮೊಗ್ಗ: ಭಾರತದ ಸ್ವಾತಂತ್ರ್ಯ ಮಹೋತ್ಸವದ 75 ನೇ ವರ್ಷಾಚರಣೆ ಪ್ರಯುಕ್ತ ರಾಜ್ಯ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಲಾಗಿರುವ ‘ಅಮೃತ ಭಾರತಿಗೆ ಕನ್ನಡದಾರತಿ’ ಕಾರ್ಯಕ್ರಮದ ಭಾಗವಾಗಿ ‘ಹೋರಾಟದ ನೆಲದಲ್ಲಿ ಒಂದು ದಿನ’ – ಕರ್ನಾಟಕದಲ್ಲಿ ನಡೆದ ಸ್ವಾತಂತ್ರ್ಯ ಹೋರಾಟದ ಚರಿತ್ರೆಯಲ್ಲಿ ದಾಖಲಾಗಿರುವ ಸ್ಥಳಗಳಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರದರ್ಶನಗೊಳ್ಳಲಿರುವ 6 ನಾಟಕಗಳ ಪ್ರಥಮ ಪ್ರದರ್ಶನ ಶಿವಮೊಗ್ಗ ರಂಗಾಯಣದ ಸುವರ್ಣ ಸಂಸ್ಕೃತಿ ಭವನದಲ್ಲಿ ಶುಕ್ರವಾರ ನಡೆಯಿತು.

ಈ ಕಾರ್ಯಕ್ರಮದಲ್ಲಿ ರಾಜ್ಯದ 5 ರಂಗಾಯಣಗಳ ಸುಮಾರು 80 ಕಲಾವಿದರು ಹಾಗೂ ಎಲ್ಲಾ ರಂಗಾಯಣಗಳ ನಿರ್ದೇಶಕರು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಯಕ್ಷ ರಂಗಾಯಣ ಕಾರ್ಕಳ ತಂಡದ ‘ಅಮರಕ್ರಾಂತಿ ಸ್ವಾತಂತ್ರ್ಯ ಹೋರಾಟ 1837’, ರಂಗಾಯಣ ಶಿವಮೊಗ್ಗದ ‘ಈಸೂರ ಕೊಡೆವು’, ಧಾರವಾಡ ರಂಗಾಯಣದ ‘ಕಿತ್ತೂರು ರಾಣಿ ಚೆನ್ನಮ್ಮ’ ಮತ್ತು ‘ನರಗುಂದ ಬಾಬಾ ಸಾಹೇಬ’, ಕಲಬುರಗಿ ರಂಗಾಯಣದ ‘ವಿಮೋಚನೆ’, ಮೈಸೂರು ರಂಗಾಯಣದ ‘ಸಂಗ್ರಾಮ’ ನಾಟಕಗಳು ಪ್ರದರ್ಶನಗೊಂಡವು.ಕನ್ನಡ ಮತ್ತು ಸಂಸ್ಕೃತಿ, ಇಂಧನ ಸಚಿವ ವಿ. ಸುನಿಲ್ ಕುಮಾರ್ ಅವರು 6 ನಾಟಕಗಳನ್ನು ವೀಕ್ಷಿಸಿ ಕಾರ್ಯಕ್ರಮದ ಯಶಸ್ಸಿಗೆ ಸಲಹೆ ನೀಡಿದರು.

ವರದಿ ಮಂಜುನಾಥ್ ಶೆಟ್ಟಿ…