ಜೀವನದಲ್ಲಿ ಉತ್ತಮ ಕೆಲಸಗಳನ್ನು ಮಾಡಿದರೆ ಜನರ ಮನಸ್ಸಿನಲ್ಲಿ ಉಳಿಯುತ್ತೇವೆ. ಈ ರೀತಿಯಲ್ಲಿ ನಾಡಪ್ರಭು ಕೆಂಪೇಗೌಡರು ಕೆಲಸ ಮಾಡಿ ಬೆಂಗಳೂರಿಗೆ ಮಹತ್ತರ ಕೊಡುಗೆ ನೀಡಿದ ಕಾರಣ 500 ವರ್ಷ ಕಳೆದರೂ ಅವರನ್ನು ನೆನಪಿಸಿಕೊಳ್ಳುತ್ತಿದ್ದೇವೆ ಎಂದು ಭದ್ರಾ ಅಚ್ಚುಕಟ್ಟು ಮಂಡಳಿ ಅಧ್ಯಕ್ಷೆ ಪವಿತ್ರಾ ರಾಮಯ್ಯ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಜಿಲ್ಲಾ ಒಕ್ಕಲಿಗರ ಸಂಘ, ಶಿವಮೊಗ್ಗ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಕುವೆಂಪು ರಂಗ ಮಂದಿರದಲ್ಲಿ ಇಂದು ಆಯೋಜಿಸಲಾಗಿದ್ದ ನಾಡಪ್ರಭು ಕೆಂಪೇಗೌಡ 513 ನೇ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ನಾನು, ನನ್ನದು, ನನ್ನ ಕುಟುಂಬ ಮಾತ್ರ ಎಂಬುದನ್ನು ಬಿಟ್ಟು ಸಮಾಜದ ಕಟ್ಟೆ ಕಡೆಯ ವ್ಯಕ್ತಿಗಳು ಮತ್ತು ರೈತರ ಶ್ರೇಯೋಭಿವೃದ್ಧಿಗಾಗಿ ಪ್ರತಿಯೊಬ್ಬ ಜನಪ್ರತಿನಿಧಿಗಳು ಶ್ರಮಿಸಬೇಕು ಎಂದರು.

ವಿಧಾನ ಪರಿಷತ್ ಶಾಸಕರಾದ ಡಿ.ಎಸ್. ಅರುಣ್ ಮಾತನಾಡಿ, ಸಮಾಜಕ್ಕೆ ತಮ್ಮ ಜೀವನವನ್ನು ಮುಡುಪಿಟ್ಟ ಮಹನೀಯರನ್ನು ಒಂದು ಜಾತಿಗೆ ಸೀಮಿತಗೊಳಿಸಬಾರದು. ಇಂತಹ ಮಹಾನ್ ಪುರುಷರ ಕುರಿತಾದ ವಿಷಯಗಳನ್ನು ಪಠ್ಯ ಪುಸ್ತಕಗಳಲ್ಲಿ ಅಳವಡಿಸುವ ಮೂಲಕ ಅವರ ಇತಿಹಾಸ, ಕೊಡುಗೆ, ಆದರ್ಶಗಳ ಬಗ್ಗೆ ತಿಳಿದುಕೊಂಡು ನಾವು ಸಹ ಮೌಲ್ಯಯುತ ಬದುಕನ್ನು ಜೀವಿಸಬೇಕು ಎಂದು ಹೇಳಿದರು. ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ ಪ್ರಾಂಶುಪಾಲರಾದ ಪೆÇ್ರ.ಎಂ.ಕೆ. ವೀಣಾ ಅವರು ನಾಡಪ್ರಭು ಕೆಂಪೇಗೌಡರ ಜೀವನ, ಅವರ ಆಡಳಿತ, ಸಮಾಜಮುಖಿ ಕಾರ್ಯಗಳು ಹಾಗೂ ಬೆಂಗಳೂರು ನಿರ್ಮಾಣಕ್ಕೆ ನೀಡಿದ ಕೊಡುಗೆ ಕುರಿತು ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕಿ ಯಮುನಾ ರಂಗೇಗೌಡ, ಸದಸ್ಯೆ ರೇಖಾ ರಂಗನಾಥ, ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ.ಲಕ್ಷ್ಮಿ ಪ್ರಸಾದ್, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಂ.ಎಲ್. ವೈಶಾಲಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಹೆಚ್.ಉಮೇಶ್, ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷರಾದ ಎನ್.ಹೆಚ್ ಶ್ರೀಕಾಂತ್ ಹಾಗೂ ಸಮಾಜದ ಮುಖಂಡರು ಸೇರಿದಂತೆ ಹಲವರಿದ್ದರು.

ವರದಿ ಮಂಜುನಾಥ್ ಶೆಟ್ಟಿ…