ಶಿವಮೊಗ್ಗ: ಶಿವಮೊಗ್ಗ ತಾಲ್ಲೂಕು ಮತ್ತು ಜಿಲ್ಲೆಯಲ್ಲಿ ಕಾರ್ಮಿಕ ಇಲಾಖೆಗಳಲ್ಲಿ ಹುದ್ದೆಗಳನ್ನು ಭರ್ತಿ ಮಾಡಿ ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಪ್ರತ್ಯೇಕ ಕಾರ್ಮಿಕ ನ್ಯಾಯಾಲಯ ಸ್ಥಾಪನೆ ಮಾಡಲು ಆಗ್ರಹಿಸಿ ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಅವರಿಗೆ ಕನ್ನಡ ಕಾರ್ಮಿಕ ರಕ್ಷಣಾ ವೇದಿಕೆ ವತಿಯಿಂದ ಮನವಿ ಸಲ್ಲಿಸಲಾಯಿತು.

ಶಿವಮೊಗ್ಗ ತಾಲೂಕು ಮತ್ತು ಜಿಲ್ಲೆಯಲ್ಲಿ ಕಾರ್ಮಿಕ ನಿರೀಕ್ಷಕರ ಅವಶ್ಯಕತೆ ಇದ್ದು, ಈಗಾಗಲೇ ಶಿಕಾರಪುರ, ಸೊರಬ, ತೀರ್ಥಹಳ್ಲಿ, ಭದ್ರಾವತಿ, ಸಾಗರ ತಾಲೂಕಿನಲ್ಲಿ ಕಾರ್ಮಿಕ ನಿರೀಕ್ಷಿಇರುವುದಿಲ್ಲ. ಈ ತಾಲೂಕುಗಳಲ್ಲಿ ಕಾರ್ಮಿಕರ ಸಮಸ್ಯೆ ಕೇಳುವವರೇ ಇಲ್ಲದಂತಾಗಿದೆ. ಜಿಲ್ಲೆಯಲ್ಲಿ ಕಾರ್ಮಿಕರ ಆಯುಕ್ತರೇ ಇಲ್ಲದಂತಾಗಿದೆ ಎಂದರು. ಆದ್ದರಿಂದ ಕಾರ್ಮಿಕರ ಸಮಸ್ಯೆಗಳನ್ನು ಆಲಿಸಲು ಹಾಗೂ ಜಿಲ್ಲೆಯಲ್ಲಿ ಅತಿಹೆಚ್ಚು ಕಾರ್ಕಾನೆಗಳಿದ್ದು, ಸಿದ್ಧ ಉಡುಪು ತಯಾರಿಕಾ ಘಟಕ, ಕೈಗಾರಿಕೆಗಳಿದ್ದು, ಲಕ್ಷಾಂತರ ಕಾರ್ಮಿಕರಿದ್ದಾರೆ. ಕಾರ್ಕಾನೆ ಮಾಲೀಕರಿಂದ ಕಾರ್ಮಿಕರಿಗೆ ಶೋಷಣೆಯಾಗುತ್ತಿದೆ ಎಂದು ಮನವಿಯಲ್ಲಿ ಆರೋಪಿಸಿದ್ದಾರೆ.

ಕಾರ್ಮಿಕರಿಗೆ ಆಗುತ್ತಿರುವ ಅನ್ಯಾಯ ಸರಿಪಡಿಸಲು ಶಿವಮೊಗ್ಗ ಜಿಲ್ಲೆಯಲ್ಲಿ ಪ್ರತ್ಯೇಕವಾವಾದ ಕಾರ್ಮಿಕ ನ್ಯಾಯಾಲಯದ ಅವಶ್ಯಕತೆ ಇದೆ. ಬೇರೆ ಜಿಲ್ಲೆಗಳಲ್ಲಿ ಪ್ರತ್ಯೇಕ ನ್ಯಾಯಾಲಯ ಇದೆ. ಆದರೆ, ಶಿವಮೊಗ್ಗ ಜಿಲ್ಲೆಯಲ್ಲಿ ಇರುವುದಿಲ್ಲ. ಆದ್ದರಿಂದ ಜಿಲ್ಲೆಯಲ್ಲಿ ಕಾರ್ಮಿಕ ನ್ಯಾಯಾಲಯ ಹಾಗೂ ಕಾರ್ಮಿಕ ನಿರೀಕ್ಷಕರು ಮತ್ತು ಕಾರ್ಮಿಕ ಾಯುಕ್ತರ ಅವಶ್ಯಕತೆ ಇದ್ದು, ಈ ಎಲ್ಲಾ ಸೌಲಭ್ಯಗಳನ್ನು ಒದಗಿಸಿಕೊಡಬೇಕೆಂದು ಮನವಿಯಲ್ಲಿ ತಿಳಿಸಿದ್ದಾರೆ.ಈ ಸಂದರ್ಭದಲ್ಲಿ ವೇದಿಕೆ ಅಧ್ಯಕ್ಷ ವಾಟಾಳ್ ಮಂಜುನಾಥ್, ಪ್ರಮುಖರಾದ ನಿತಿನ್ ರೆಡ್ಡಿ, ರವಿಕುಮಾರ್, ಪೈಲ್ವಾನ್ ರವಿ, ಲೋಕೇಶ್, ಅಸ್ಗರ್ ಪಾಶ, ರಾಘವೇಂದ್ರ  ಸಂತೋಷ್ ಇದ್ದರು. 

ವರದಿ ಮಂಜುನಾಥ್ ಶೆಟ್ಟಿ…