ಶಿವಮೊಗ್ಗ: ಜಿಲ್ಲಾ ಒಕ್ಕಲಿಗರ ಯುವ ವೇದಿಕೆ ವತಿಯಿಂದ ಜು. 9 ರಂದು ನಗರದ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಒಕ್ಕಲಿಗರ ಯುವ ಸಮಾವೇಶ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ವೇದಿಕೆಯ ಅಧ್ಯಕ್ಷ ಕೆ. ಚೇತನ್ ತಿಳಿಸಿದ್ದಾರೆ.
ಈ ಸಮಾವೇಶದಲ್ಲಿ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಾಗೂ ಸಾಧಕರಿಗೆ ಸನ್ಮಾನಿಸಲಾಗುವುದು. ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ, ಪ್ರಧಾನ ಕಾರ್ಯದರ್ಶಿ ಶ್ರೀ ಪ್ರಸನ್ನನಾಥ ಸ್ವಾಮೀಜಿ ಸಾನಿಧ್ಯ ವಹಿಸುವರು.ಸಮಾವೇಶವನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸಿ. ನಾರಾಯಣಗೌಡ ಉದ್ಘಾಟಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ, ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಸಿ.ಎನ್. ಬಾಲಕೃಷ್ಣ, ಒಕ್ಕಲಿಗರ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ. ಕೃಷ್ಣಪ್ಪ, ಶಾಸಕರಾದ ಶರತ್ ಬಚ್ಚೇಗೌಡ, ಎಸ್.ಎಲ್. ಭೋಜೇಗೌಡ, ಚಿತ್ರ ನಿರ್ಮಾಪಕ ಉಮಾಪತಿ ಶ್ರೀನಿವಾಸಗೌಡ, ಯುವ ಜನತಾದಳ ರಾಜ್ಯಾಧ್ಯಕ್ಷ ಹಾಗೂ ನಟ ನಿಖಿಲ್ ಕುಮಾರಸ್ವಾಮಿ, ಭವ್ಯ ನರಸಿಂಹಮೂರ್ತಿ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.