ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಹಾಗೂ ಪ್ರಧಾನ ಮಂತ್ರಿ ಕೃಷಿ ಸಮ್ಮಾನ್ ನಿಧಿ ಯೋಜನೆಯಡಿ ರೈತರು ಸೌಲಭ್ಯ ಪಡೆಯುತ್ತಿದ್ದು 2019-20 ನೇ ಸಾಲಿನಿಂದ ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಸಹಾಯಧನ ಜಮೆಯಾಗಲು ಆಧಾರ್ ಆಧಾರಿತ ಪಾವತಿಗೆ ಒತ್ತು ನೀಡಲಾಗುತ್ತಿದೆ.

ಆಧಾರ್ ಕಾರ್ಡನ್ನು ಎನ್‍ಪಿಸಿಐ ಲಿಂಕ್ ಮಾಡಿಸದ ರೈತರಿಗೆ ಸರ್ಕಾರದ ಸೌಲಭ್ಯ ದೊರೆಯುವಲ್ಲಿ ವಿಳಂಬವಾಗುತ್ತಿದೆ. ಈ ರೀತಿಯ ವಿಳಂಬ ತಪ್ಪಿಸಲು ರೈತರು ಕಡ್ಡಾಯವಾಗಿ ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್‍ನ್ನು ಎನ್‍ಪಿಸಿಐ ಲಿಂಕ್ ಮಾಡಿಸಲು ಈ ಕೂಡಲೇ ತಮ್ಮ ಬ್ಯಾಂಕನ್ನು ಸಂಪರ್ಕಿಸಬೇಕೆಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ತಿಳಿಸಿದ್ದಾರೆ.

ವರದಿ ಮಂಜುನಾಥ್ ಶೆಟ್ಟಿ…