ಶಿವಮೊಗ್ಗ: ನಗರದ ಗೌಡ ಸಾರಸ್ವತ ಸಮಾಜದ ಶ್ರೀ ಲಕ್ಷ್ಮಿ ವೆಂಕಟರಮಣ ದೇವಮಂದಿರದಲ್ಲಿ ನಿನ್ನೆ ಆಷಾಢ ಏಕಾದಶಿ ಪ್ರಯುಕ್ತ ಬೆಳಗ್ಗೆ 8 ರಿಂದ ರಾತ್ರಿ 8 ಗಂಟೆಯವರೆಗೆ ವಿವಿಧ ತಂಡಗಳಿಂದ ಭಜನಾ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ವಿಠೋಬ ರುಖುಮಾಯಿ ಪ್ರತಿಮೆ ಇಟ್ಟು ವಿಶೇಷ ಅಲಂಕಾರ ಮಾಡಲಾಗಿತ್ತು. ಅಪಾರ ಸಂಖ್ಯೆಯ ಭಕ್ತರು ಆಗಮಿಸಿ ದೇವರ ಕೃಪೆಗೆ ಪಾತ್ರರಾದರು.

ವರದಿ ಮಂಜುನಾಥ್ ಶೆಟ್ಟಿ…