ಶಿವಮೊಗ್ಗ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಶಿವಮೊಗ್ಗ ಇವರ ಸಂಯುಕ್ತ ಆಶ್ರಯದಲ್ಲಿ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಮೆಡಿಕಲ್ ಹಾಗೂ ಇಂಜಿನಿಯರಿಂಗ್ ಮಹಿಳಾ ವಿದ್ಯಾರ್ಥಿ ನಿಲಯವನ್ನು ಚನ್ನಮುಂಭಾಪುರ ಗ್ರಾಮದಲ್ಲಿ ನೂತನ ಕಟ್ಟಡವನ್ನು ಮಾಜಿ ಉಪಮುಖ್ಯಮಂತ್ರಿ, ಶಾಸಕ ಕೆ.ಎಸ್. ಈಶ್ವರಪ್ಪ, ಶಿವಮೊಗ್ಗ ಗ್ರಾಮಾಂತರ ಶಾಸಕ ಕೆ.ಬಿ. ಅಶೋಕ್ ನಾಯ್ಕ, ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಹಾಪೌರರಾದ ಸುನೀತಾ ಅಣ್ಣಪ್ಪ, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಕುಮಾರ್, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಬಸಮ್ಮ ಅವರು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಇಲಾಖೆಯ ಅಧಿಕಾರಿಗಳು, ವಿದ್ಯಾರ್ಥಿನಿಯರು  ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ…