ಬೆಂಗಳೂರು ನಗರ ಪ್ರದೇಶಗಳಲ್ಲಿ ಗಾಂಜಾ ಬೆಳೆದ ಸ್ಥಳವನ್ನು ಗುರುತಿಸಿ ಅಪರಾಧಿಗಳನ್ನ ಪೋಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡುವ ಮೂಲಕ ಕಣ್ಣು ಮುಚ್ಚಿಕೊಂಡು ಆಡಳಿತ ನಡೆಸುತ್ತಿರುವ ರಾಜ್ಯ ಸರ್ಕಾರಕ್ಕೆ ಎಚ್ಚರಿಸುವ ಕೆಲಸ ಮಾಡಬೇಕಾಗಿದೆ ಎಂದು ಮಾಜಿ ಶಾಸಕರು ಹಾಗೂ ಕೆಪಿಸಿಸಿ ವಕ್ತಾರರಾದ ಗೋಪಾಲಕೃಷ್ಣ ಬೇಳೂರು ಹೇಳಿದ್ದಾರೆ.
ಕೇವಲ ಗ್ರಾಮೀಣ ಪ್ರದೇಶಗಳಲ್ಲಿ ವಿವಿಧ ರೀತಿಯ ಬೆಳೆಗಳ ನಡುವೆ ಗೌಪ್ಯವಾಗಿ ಬೆಳೆಯುತ್ತಿರುವ ಮತ್ತು ಮಾರಾಟ ಮಾಡುವ ವಿಷಯ ಕೇಳಲಾಗುತ್ತಿತ್ತು. ಆದರೀಗ ಇದು ನಗರ ಪ್ರದೇದವರೆಗೂ ಹಬ್ಬಿರುವುದು ಎಂದು ಮಾಜಿ ಶಾಸಕರು ಹಾಗೂ ಕೆಪಿಸಿಸಿ ವಕ್ತಾರರಾದ ಗೋಪಾಲಕೃಷ್ಣ ಬೇಳೂರುರವರು ಆರೋಪಿಸಿದ್ದಾರೆ. ಬೆಂಗಳೂರಿನ ಆರ್ ಟಿ ನಗರದ ಅವರ ನಿವಾಸದ ಆಸುಪಾಸಿನಲ್ಲಿಯೇ ಬೆಳೆದಿದ್ದನ್ನು ಗಮನಿಸಿ ಪೋಲೀಸ್ ಇಲಾಖೆಗೆ ಮಾಹಿತಿ ನೀಡಿದರು.ಪೋಲೀಸ್ ಅಧಿಕಾರಿಗಳು ಆಗಮಿಸಿ ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಶಾಸಕರು ಹಾಗೂ ಕೆಪಿಸಿಸಿ ವಕ್ತಾರರಾದ ಗೋಪಾಲಕೃಷ್ಣ ಬೇಳೂರುರವರು ಕೇವಲ ಗ್ರಾಮೀಣ ಪ್ರದೇಶಗಳಲ್ಲಿ ಗಾಂಜಾ ಬೆಳೆಯುವ ಅಥವಾ ಮಾರಾಟ ಮಾಡುವುದನ್ನ ಕೇಳಿ ಬರುತ್ತಿತ್ತು ಆದರೀಗ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿಯೂ ಆಶ್ಚರ್ಯದ ಸಂಗತಿಯೆಂದರೆ ತಪ್ಪಾಗಲಾರದು. ಯುವ ಸಮುದಾಯವನ್ನು ಹಾಳು ಮಾಡುವ ಗಾಂಜಾ ಮಾರಾಟ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕಾಗಿದ್ದ ಪೋಲೀಸ್ ಇಲಾಖೆಯಲ್ಲಿ ಗಾಂಜ ಬೆಳೆಯುವವರಿಗೆ ಸಹಕಾರ ನೀಡುವ ಕೆಲಸ ಖಂಡನೀಯ ಎಂದರು.
ಬೆಂಗಳೂರಿನಂತಹ ಮಹಾನಗರದಲ್ಲಿಯೇ ಈ ರೀತಿ ರಾಜಾರೋಷವಾಗಿ ಗಾಂಜಾವನ್ನು ಬೆಳೆಯುತ್ತಿದ್ದಾರೆ ಎಂದರೆ ರಾಜ್ಯ ಸರ್ಕಾರದ ಗೃಹ ಸಚಿವರೇನು ಕಣ್ಣು ಮುಚ್ಚಿಕೊಂಡಿದ್ದಾರೆಯೇ, ರಾಜ್ಯದ ಆಡಳಿತ ನಡೆಸುತ್ತಿರುವವರೇ ಇದಕ್ಕೆ ಕುಮ್ಮಕ್ಕು ನೀಡುತ್ತಿದ್ದಾರೆ ಎಂಬ ಪ್ರಶ್ನೆ ಮೂಡುವುದರಲ್ಲಿ ಅನುಮಾನವಿಲ್ಲ ಎಂದರು.