ಕರ್ನಾಟಕ ರಾಜ್ಯ ಕರಾಟೆ ಸಂಸ್ಥೆ ವತಿಯಿಂದ ಮಾನ್ಯ ಶಿಕ್ಷಣ ಸಚಿವರಾದ ಶ್ರೀ ಬಿ ಸಿ ನಾಗೇಶ್ ರವರಿಗೆ ಇಂದು ಶಿವಮೊಗ್ಗ ನಗರದಲ್ಲಿ ರಾಜ್ಯದ ಸರ್ಕಾರಿ ಪ್ರೌಢಶಾಲೆಗಳಲ್ಲಿ ವಿದ್ಯಾರ್ಥಿನಿಯರಿಗೆ ಸ್ವರಕ್ಷಣಾ ಕೌಶಲ್ಯ ತರಬೇತಿ ನೀಡುವ ಯೋಜನೆಯನ್ನು ಜಾರಿಗೆ ತರಬೇಕೆಂದು ಕೋರಿ ಮನವಿ ಮಾಡಲಾಯಿತು.

ಪ್ರಸ್ತುತ ಸನ್ನಿವೇಶದಲ್ಲಿ ವಿದ್ಯಾರ್ಥಿನಿಯರಿಗೆ ಸ್ವರಕ್ಷಣಾ ಕೌಶಲ್ಯವೂ ಅತ್ಯವಶ್ಯಕವಾಗಿದು ಸಮಾಜ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಡಿಯಲ್ಲಿ ವಸತಿ ಶಾಲೆಗಳಲ್ಲಿ ಮತ್ತು ವಸತಿ ನಿಲಯಗಳಲ್ಲಿ ಸ್ವರಕ್ಷಣೆ ಕೌಶಲ್ಯ ತರಬೇತಿಯನ್ನು ನೀಡುತ್ತಿದ್ದು ಸಂತಸದ ವಿಷಯವಾಗಿದು ಆದರೆ ಇಂತಹ ಯೋಜನೆಯಿಂದ ರಾಜ್ಯದ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿನಿಯರು ವಂಚಿತರಾಗಿದ್ದು
2012 ರಲ್ಲಿ ದೆಹಲಿಯಲ್ಲಿ ನಡೆದ ನಿರ್ಭಯಾ ಅತ್ಯಾಚಾರ ಪ್ರಕರಣದ ನಂತರ ಭಾರತ ಸರ್ಕಾರವು ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣದ ಅಡಿಯಲ್ಲಿ ದೇಶಾದ್ಯಂತ ಪ್ರೌಢಶಾಲಾ ವಿದ್ಯಾರ್ಥಿನಿಯರಿಗೆ ಸ್ವರಕ್ಷಣೆ ಕೌಶಲ್ಯ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು.

ಆದರೆ ಆ ಕಾರ್ಯಕ್ರಮವು 3 ವರ್ಷಗಳ ಅವಧಿಗೆ ಸೀಮಿತವಾಗಿದ್ದು ನಂತರ ಮತ್ತೆ ಆರಂಭವಾಗಲಿಲ್ಲ
ಇದರಿಂದ ರಾಜ್ಯದಲ್ಲಿನ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿನಿಯರಿಗೆ ಸ್ವ ರಕ್ಷಣಾ ಕೌಶಲ್ಯ ತರಬೇತಿ ಕಾರ್ಯಕ್ರಮವು ಸ್ಥಗಿತಗೊಂಡಿದು
ತಮ್ಮ ಗಮನಕ್ಕೆ ತಿಳಿಸುತ್ತಾ ಸ್ವರಕ್ಷಣಾ ಕೌಶಲ್ಯವು ವಿದ್ಯಾರ್ಥಿನಿಯರಿಗೆ ಮೂಲಭೂತ ಕಲಿಕಾ ವಿಷಯವಾಗಿದ್ದು.ಈ ಕೂಡಲೇ ರಾಜ್ಯದಲ್ಲಿನ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿನಿಯರಿಗೆ ಸ್ವರಕ್ಷಣಾ ಕೌಶಲ್ಯ ಯೋಜನೆಯೊಂದನ್ನು ಜಾರಿಗೊಳಿಸಬೇಕಾಗಿ ವಿನಂತಿಸಲಾಯಿತು.ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಕರಾಟೆ ಸಂಸ್ಥೆಯ ಅಧ್ಯಕ್ಷರಾದ ಶಿವಮೊಗ್ಗ ವಿನೋದ್ ಮತ್ತು ಸಂಸ್ಥೆಯ ಪ್ರಮುಖರಾದ ರಾಘವೇಂದ್ರ ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ…