ಶಿಕಾರಿಪುರ ನ್ಯೂಸ್…
ಶಿಕಾರಿಪುರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾ. ಆದಿ ಜಾoಭವ ನೌಕರರ ಕ್ಷೇಮಾಭಿವೃದ್ಧಿ ಸಂಘ, ನಿತ್ಯೋತ್ಸವ ಸೇವಾ ಟ್ರಸ್ಟ್ ಹಾಗೂ ದಲಿತ ಸಂಘರ್ಷ ಸಮಿತಿ ವತಿಯಿಂದ ಪ್ರತಿಭಾವಂತ ಮಕ್ಕಳಿಗೆ ಪುರಸ್ಕಾರ, ನಿವೃತ್ತ ನೌಕರರಿಗೆ ಹಾಗೂ ಸಾಧಕರಿಗೆ ಕಾರ್ಯಕ್ರಮವನ್ನು ಸಂಸದರಾದ ಬಿ ವೈ ರಾಘವೇಂದ್ರ ಅವರು ಉದ್ಘಾಟಿಸಿದರು.
ಜಂಭೂ ದ್ವೀಪ ಎಂಬ ಹೆಸರು ನಮ್ಮ ಭಾರತಕ್ಕಿದೆ ರಾಮಾಯಣದಲ್ಲಿ ಜಾoಭವಂತನ ಪುರಾಣದಲ್ಲಿ ಉಲ್ಲೇಖವಿದೆ, ಆರ್ಥಿಕವಾಗಿ ಸಾಮಾಜಿಕವಾಗಿ ಹಿಂದುಳಿದ ವರ್ಗದವರು ಮೀಸಲಾತಿಯನ್ನು ಸರಿಯಾಗಿ ಉಪಯೋಗಿಸಿಕೊಳ್ಳಬೇಕು ಆಗ ಮಾತ್ರ ಉಳ್ಳವರು ಹಣ ಮಾಡುವ ಚಾಳಿ ಕಡಿಮೆಯಾಗುತ್ತದೆ ಎಂದು ಹೇಳಿದರು.
2019-20 ಸಾಲಿನಲ್ಲಿ ಬಿ.ಎಸ್. ಯಡಿಯೂರಪ್ಪನವರು ಮುಖ್ಯಮಂತ್ರಿಗಳಾಗಿದ್ದಾಗ ಆದಿಜಾಂಬವ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿದ್ದಲ್ಲದೆ ರೂ 350 ಕೋಟಿ ಅನುದಾನ ಒದಗಿಸಿದ್ದರು. 75 ಫಲಾನುಭವಿಗಳಿಗೆ ಸ್ವಯಂ ಉದ್ಯೋಗ ಸಾಲ ಹಾಗೂ 30 ಮಹಿಳಾ ಸ್ವ ಸಹಾಯ ಸಂಘಗಳಿಗೆ ರೂ 2.5 ಲಕ್ಷ ಆರ್ಥಿಕ ನೆರವನ್ನು ನೀಡಲಾಗಿದೆ. ಶಿಕಾರಿಪುರ ಪಟ್ಟಣದಲ್ಲಿ ತಾಲ್ಲೂಕು ಮಟ್ಟದ ಬಾಬು ಜಗಜೀವನ್ ರಾಂ ಭವನ ನಿರ್ಮಾಣಕ್ಕಾಗಿ ಸುಮಾರು 1 ಕೋಟಿ 50 ಲಕ್ಷಕ್ಕೂ ಅನುದಾನ ಬಿಡುಗಾಡಿ ಕಾಮಗಾರಿ ಪೂರ್ಣಗೊಂಡು ಉದ್ಘಾಟನೆಯು ಆಗಿದ್ದು ಹೀಗೆ ತಾಲ್ಲೂಕಿನಾದ್ಯಂತ ವಿವಿಧ ಆಯ್ದ ಗ್ರಾಮಗಳಲ್ಲಿ ಬಾಬು ಜಗಜೀವನ್ ರಾಂ ಭವನಗಳನ್ನು ನಿರ್ಮಾಣ ಮಾಡಲಾಗಿದೆ.ಈ ಸಮಾಜದ ವರ್ಗದ ಏಳಿಗೆಗಾಗಿ ಅನೇಕ ಯೋಜನೆಗಳಿವೆ ಅದನ್ನು ಸರಿಯಾಗಿ ಉಪಯೋಗಿಸುವ ಕೆಲಸವಾಗಬೇಕು ಎಂದು ಸಂಸದರಾದ ಬಿ. ವೈ ರಾಘವೇಂದ್ರ ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಮಲೆನಾಡು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಕೆ ಎಸ್ ಗುರುಮೂರ್ತಿ ಅವರು. ಪುರಸಭೆ ಅಧ್ಯಕ್ಷರು, ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು. ಜಗದೀಶ್. ತಿಮ್ಮಪ್ಪ. ಪಾಪಯ್ಯ. ಓಂ ಕಾರ ನಾಯ್ಕ್ ಮತ್ತಿತರರು ಉಪಸ್ಥಿತರಿದ್ದರು.