ಶಿವಮೊಗ್ಗ: ಸ್ಮಾರ್ಟ್ ಸಿಟಿ ಕಳಪೆ ಕಾಮಗಾರಿ ನಡೆದಿರುವುದಕ್ಕೆ ಭ್ರಷ್ಟಾಚಾರವೇ ಕಾರಣ ಎಂದು ಆರೋಪಿಸಿ ಆಮ್ ಆದ್ಮಿ ಪಕ್ಷದ ಜಿಲ್ಲಾ ಘಟಕದ ವತಿಯಿಂದ ತನಿಖೆಗೆ ಆಗ್ರಹಿಸಿ ಇಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ನಗರದಲ್ಲಿ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಕಾಮಗಾರಿ ಸಂಪೂರ್ಣ ಕಳೆಯಾಗಿದೆ. ಕೇವಲ 15 ದಿನದ ಮಳೆಗೆ ರಸ್ತೆಗಳೆಲ್ಲಾ ಹಾಳಾಗಿವೆ. ಬಹುತೇಕ ಕಡೆಗಳಲ್ಲಿ ಫುಟ್ ಪಾತ್ ಗಳು ಕಿತ್ತು ಹೋಗಿವೆ. ಇದರಿಂದ ಅವ್ಯವಹಾರ ಹಾಗೂ ಭ್ರಷ್ಟಾಚಾರ ನಡೆದಿರುವುದು ಎದ್ದು ಕಾಣುತ್ತದೆ. ತೆರಿಗೆ ರೂಪದಲ್ಲಿ ಜನರು ಕಟ್ಟಿದ ಕೋಟ್ಯಂತರ ರೂ. ಅಧಿಕಾರಿಗಳು ಮನಸ್ಸಿಗೆ ಬಂದಂತೆ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಮನವಿದಾರರು ದೂರಿದರು.

ಜಿಲ್ಲಾಧಿಕಾರಿಗಳು ಈ ವಿಷಯದ ಬಗ್ಗೆ ಗಮನಹರಿಸಬೇಕು. ಕಳಪೆ ಕಾಮಗಾರಿಗಳ ತನಿಖೆ ನಡೆಸಬೇಕು. ತಪ್ಪಿತಸ್ಥರ ಮೇಲೆ ಅಗತ್ಯ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಮನವಿಯಲ್ಲಿ ಆಗ್ರಹಿಸಲಾಗಿದೆ.ಈ ಸಂದರ್ಭದಲ್ಲಿ ಆಮ್ ಆದ್ಮಿ ಪಕ್ಷದ ಮುಖಂಡರಾದ ಏಳುಮಲೈ(ಕೇಬಲ್ ಬಾಬು), ನೇತ್ರಾವತಿ, ಕಿರಣ್, ಸುರೇಶ್ ಕಾಟೇಕರ್ , ರಮೇಶ್ ಮೊದಲಾದವರಿದ್ದರು.

ವರದಿ ಮಂಜುನಾಥ್ ಶೆಟ್ಟಿ…