1975 ರಲ್ಲಿ ಹೇರಿದ ತುರ್ತು ಪರಿಸ್ಥಿತಿಯ ಕರಾಳ ದಿನದ ನೆನಪಿಗಾಗಿ , ಕರಾಳ ದಿನ ಒಂದು ನೆನಪು ಕಾರ್ಯಕ್ರಮವು ತೀರ್ಥಹಳ್ಳಿ ಮಂಡಲ ಬಿಜೆಪಿ ಇಂದ ಇಂದು ನಡೆಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಡಲ ಬಿಜೆಪಿ ಅಧ್ಯಕ್ಷರಾದ ಶ್ರೀ ಬಾಳೆ ಬೈಲು ರಾಘವೇಂದ್ರ ವಹಿಸಿದ್ದರು. ಶಾಸಕರಾದ ಆರಗ ಜ್ಞಾನೇಂದ್ರ, ಮುಖ್ಯ ವಕ್ತಾರರಾಗಿ ಜಯಶೀಲ ಜೀ ಉಪಸ್ಥಿತರಿದ್ದು ತುರ್ತು ಪರಿಸ್ಥಿತಿಯಲ್ಲಿ ತಮ್ಮ ಕಹಿ ನೆನಪುಗಳು, ಅನುಭವಗಳನ್ನು, ಅಂದಿನ ಸರ್ಕಾರದ ನೀತಿ ನಿಯಮಗಳ ಬಗ್ಗೆ ಅನಿಸಿಕೆಯನ್ನು ಹಂಚಿಕೊಂಡರು. ಆ ಸಮಯದಲ್ಲಿ ಹಲವಾರು ಕಾರ್ಯಕರ್ತರು ಜೈಲು ವಾಸ ಅನುಭವಿಸಿದವರು, ಪ್ರತಿಭಟನೆಯಲ್ಲಿ ಭಾಗವಹಿಸಿದ್ದವರ ಆರೈಕೆ ಮಾಡಿದವರನ್ನು ಪಕ್ಷದ ಕಡೆಯಿಂದ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಪಕ್ಷದ ಪದಾಧಿಕಾರಿಗಳು, ಜನಪ್ರತಿನಿಧಿಗಳು, ಪ್ರಮುಖ ನಾಯಕರುಗಳು, RSS ಪ್ರಮುಖರು, ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ವರದಿ ಮಂಜುನಾಥಶೆಟ್ಟಿ ಶಿವಮೊಗ್ಗ

CCTV SALES & SERVICE

9880074684

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153