ಶಿವಮೊಗ್ಗ: ವಿದ್ಯಾರ್ಥಿಗಳ ಬೌದ್ಧಿಕ ಸಾಮಾರ್ಥ್ಯ ವೃದ್ಧಿಸಲು ಇಂರ‍್ಯಾಕ್ಟ್ ಕ್ಲಬ್ ಸಹಕಾರಿಯಾಗಿದ್ದು, ವಿದ್ಯಾರ್ಥಿಗಳ ಪ್ರತಿಭೆ ಅನಾವರಣ ಮಾಡಲು ವೇದಿಕೆ ಒದಗಿಸುವ ಕೆಲಸ ಮಾಡುತ್ತದೆ ಎಂದು ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷೆ ಜಿ.ಎಸ್.ಸುಮತಿ ಹೇಳಿದರು.

ನಗರದ ಗಾಯತ್ರಿ ವಿದ್ಯಾಲಯದಲ್ಲಿ ರೋಟರಿ ಶಿವಮೊಗ್ಗ ಪೂರ್ವ ವತಿಯಿಂದ ಹಮ್ಮಿಕೊಳ್ಳಲಾದ ಇಂರ‍್ಯಾಕ್ಟ್ ಕ್ಲಬ್ ಪದಗ್ರಹಣ, ಪ್ರತಿಭಾ ಪುರಸ್ಕಾರ, ನೋಟ್ ಪುಸ್ತಕ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದ ಜತೆಯಲ್ಲಿ ಸಮಾಜಮುಖಿ ಸೇವೆಗಳಲ್ಲಿ ತೊಡಗಿಸಿಕೊಳ್ಳಲು ಇಂರ‍್ಯಾಕ್ಟ್ ಕ್ಲಬ್ ಸಂಪರ್ಕ ಸೇತುವೆಯಾಗಿ ಕೆಲಸ ಮಾಡುತ್ತದೆ. ಬೇರೆ ಬೇರೆ ದೇಶದ ವಿದ್ಯಾರ್ಥಿಗಳೊಂದಿಗೆ ಪ್ರತಿಭೆಯನ್ನು ಹಂಚಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು.
ಮಾಜಿ ಸಹಾಯಕ ಗವರ್ನರ್ ಚಂದ್ರಹಾಸ್ ರಾಯ್ಕರ್ ಎಸ್‌ಎಸ್‌ಎಲ್‌ಸಿಯಲ್ಲಿ ಅತಿ ಹೆಚ್ಚಯ ಗಳಿಸಿದ ವಿದ್ಯಾರ್ಥಿಗಳಿಗೆ ನಗದು ಬಹುಮಾನ, ಶಬ್ಧಕೋಶ, ಪಾರಿತೋಷಕ ನೀಡಿ ಗೌರವಿಸಿದರು. ಇಂರ‍್ಯಾಕ್ಟ್ ಕ್ಲಬ್ ನಾಯಕತ್ವದ ಗುಣದ ಜತೆಗೆ ವೇದಿಕೆಗೆ ಅವಕಾಶ ಕಲ್ಪಿಸಿ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಸಹಕಾರಿಯಾಗುತ್ತದೆ ಎಂದರು.

ರೋಟರಿ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಕುಮಾರಸ್ವಾಮಿ ಅವರು ಆರ್ಥಿಕವಾಗಿ ಹಿಂದುಳಿದ ಮಕ್ಕಳಿಗೆ ನೋಟ್ ಪುಸ್ತಕ ವಿತರಿಸಿ ಶುಭಾಶಯ ತಿಳಿಸಿದರು. ಇದೇ ಸಂದರ್ಭದಲ್ಲಿ ಶಾಲೆಗೆ ರೋಟರಿ ಸಂಸ್ಥೆ ವತಿಯಿಂದ ಶುದ್ಧ ಕುಡಿಯುವ ನೀರಿನ ಘಟಕ, ಸ್ಮಾರ್ಟ್ ಕ್ಲಾಸ್, ಕಂಪ್ಯೂಟರ್‌ಅನ್ನು ದೇಣಿಗೆಯಾಗಿ ನೀಡಿದರು.
ಮಾಜಿ ಸಹಾಯಕ ಗವರ್ನರ್ ಜಿ.ವಿಜಯ್‌ಕುಮಾರ್, ಹೈಸ್ಕೂಲ್‌ನಲ್ಲಿ ವಿಭಾಗದಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಬಗದು ಬಹುಮಾನ ನೀಡಿ ಗೌರವಿಸಿದರು.
ಗಾಯತ್ರಿ ಇಂರ‍್ಯಾಕ್ಟ್ ಕ್ಲಬ್ ನೂತನ ಅಧ್ಯಕ್ಷರಾಗಿ ಸುಮುಖ, ಕಾರ್ಯದರ್ಶಿ ಅರ್ಚನಾ, ತಮ್ಮ ತಂಡದೊAದಿಗೆ ಅಧಿಕಾರ ವಹಿಸಿಕೊಂಡರು. ಗಾಯತ್ರಿ ವಿದ್ಯಾಲಯದ ಕಾರ್ಯದರ್ಶಿ ಪ್ರಕಾಶ್ ರಾಯ್ಕರ್, ಸಹಕಾರ್ಯದರ್ಶಿ ಗಣಪತಿ ಶೆಟ್, ರೋಟರಿ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಕುಮಾರಸ್ವಾಮಿ, ಜಿ.ವಿಜಯ್‌ಕುಮಾರ್, ಇನ್ನರ್‌ವ್ಹೀಲ್ ಮಾಜಿ ಅಧ್ಯಕ್ಷರಾದ ವಿಜಯ ರಾಯ್ಕರ್, ಬಿಂದು ವಿಜಯ್‌ಕುಮಾರ್ ಹಾಗೂ ಸದಸ್ಯರು ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ…