ಶಿವಮೊಗ್ಗ: ಮಕ್ಕಳ ಪ್ರತಿಭೆಗೆ ಸಂಘ ಸಂಸ್ಥೆಗಳ ಪ್ರೋತ್ಸಾಹ ಅಗತ್ಯ. ಮಕ್ಕಳು ಆಸಕ್ತಿ ವಹಿಸುವ ಕ್ಷೇತ್ರದಲ್ಲಿ ಸಾಧನೆ ಮಾಡಲು ಪ್ರೇರೆಪಿಸಬೇಕು. ಅವರ ಆಸಕ್ತ ಕ್ಷೇತ್ರವನ್ನು ಗುರುತಿಸಿ ಸಾಧನೆ ಮಾಡುವಂತೆ ಸ್ಫೂರ್ತಿ ತುಂಬಬೇಕು ಎಂದು ಶ್ರೀನಿಧಿ ಎಜುಕೇಷನ್ ಸೊಸೈಟಿ ಅಧ್ಯಕ್ಷ ಡಾ. ಕಡಿದಾಳ್ ಗೋಪಾಲ್ ಹೇಳಿದರು.
ರಾಜೇಂದ್ರ ನಗರದ ಸಹ್ಯಾದ್ರಿ ಪ್ರೌಢಶಾಲೆಯಲ್ಲಿ 2022-23ನೇ ಸಾಲಿನ ವಿದ್ಯಾರ್ಥಿ ಸಂಘ ಮತ್ತು ರೋಟರಿ ಶಿವಮೊಗ್ಗ ಪೂರ್ವ ವತಿಯಿಂದ ಆಯೋಜಿಸಿದ್ದ ಇಂಟ ರಾಕ್ಟ್ ಕ್ಲಬ್ ಉದ್ಘಾಟನಾ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವಿದ್ಯಾರ್ಥಿಗಳು ಉತ್ತಮ ವಿದ್ಯಾಭ್ಯಾಸ ಪಡೆದುಕೊಳ್ಳುವ ಜತೆಯಲ್ಲಿ ಶೈಕ್ಷಣಿಕವಾಗಿ ಉತ್ತಮ ಸಾಧನೆ ಮಾಡಬೇಕು. ಸಮಾಜದಲ್ಲಿ ಉನ್ನತ ಸ್ಥಾನ ಅಲಂಕರಿಸಿ ಸಮಾಜಮುಖಿಯಾಗಿ ಸೇವೆ ಸಲ್ಲಿಸಲು ಮುಂದಾಗಬೇಕು. ಶಿವಮೊಗ್ಗ ಜಿಲ್ಲೆಯ ಕೀರ್ತಿಯನ್ನು ರಾಜ್ಯ, ರಾಷ್ಟç ಹಾಗೂ ಅಂತರಾಷ್ಟಿçÃಯ ಮಟ್ಟದಲ್ಲಿ ಹೆಸರು ತರಬೇಕು ಎಂದು ತಿಳಿಸಿದರು.
ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 615 ಅಂಕ ಗಳಿಸಿದ ವಿದ್ಯಾರ್ಥಿಗೆ 15 ಸಾವಿರ ರೂ. ಹಾಗೂ 600ಕ್ಕೂ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ 10 ಸಾವಿರ ರೂ. ಪ್ರೋತ್ಸಾಹಿಸಲಾಗುವುದು ಎಂದರು.
ಇದೇ ಸಂದರ್ಭದಲ್ಲಿ ಇಂಟ ರಾಕ್ಟ್ ಕ್ಲಬ್ ಉದ್ಘಾಟನೆ ಮಾಡಿ ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷೆ ಸುಮತಿ ಕುಮಾರಸ್ವಾಮಿ ಮಾತನಾಡಿ, ರೋಟರಿ ಕ್ಲಬ್ ವತಿಯಿಂದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪೂರಕವಾಗಿ ಪ್ರೋತ್ಸಾಹಿಸುತ್ತಿದ್ದು, ನಿರಂತರವಾಗಿ ತರಬೇತಿ ಶಿಬಿರಗಳನ್ನು ಹಮ್ಮಿಕೊಳ್ಳಲಾಗುತ್ತದೆ. ಆರೋಗ್ಯ ಶಿಬಿರಗಳನ್ನು ಸಹ ನಡೆಸಲಾಗುವುದು ಎಂದು ಹೇಳಿದರು.
ಎಸ್‌ಎಸ್‌ಎಲ್‌ಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ನೀಡಿ ಸನ್ಮಾನಿಸಿ ಬಡಮಕ್ಕಳಿಗೆ ನೋಟ್ ಪುಸ್ತಕ ವಿತರಣೆ ಮಾಡಿದರು. ಇನ್ನರ್‌ವ್ಹೀಲ್ ಕ್ಲಬ್ ಶಿವಮೊಗ್ಗ ಪೂರ್ವ ಅಧ್ಯಕ್ಷೆ ಮಧುರಾ ಮಹೇಶ್, ಶಬರಿ ಕಡಿದಾಳ್, ಮಾಜಿ ಅಧ್ಯಕ್ಷರಾದ ಬಿಂದು ವಿಜಯ್‌ಕುಮಾರ್, ಪ್ರೌಢಶಾಲಾ ಮಕ್ಕಳಿಗೆ ಶಬ್ಧಕೋಶ ಹಾಗೂ ಲೇಖನ ಸಾಮಾಗ್ರಿಗಳನ್ನು ವಿತರಿಸಿದರು.
2022-23ನೇ ಸಾಲಿಗೆ ಸಹ್ಯಾದ್ರಿ ಪ್ರೌಢಶಾಲೆ ವಿದ್ಯಾರ್ಥಿ ಸಂಘ ಮತ್ತು ಇಂಟ ರಾಕ್ಟ್ ನೂತನ ಅಧ್ಯಕ್ಷರಾಗಿ ಪೃಥ್ವಿರಾಜ್, ಕಾರ್ಯದರ್ಶಿಯಾಗಿ ದರ್ಶನ್ ಎಂ. ಆಯ್ಕೆಯಾಗಿ ಮುಂದಿನ ಕಾರ್ಯಕ್ರಮಗಳ ಬಗ್ಗೆ ತಿಳಿಸಿದರು.
ರೋಟರಿ ವಲಯ ಮಾಜಿ ಸಹಾಯಕ ಗವರ್ನರ್ ಜಿ.ವಿಜಯ್‌ಕುಮಾರ್, ಇಂಟ ರಾಕ್ಟ್ ಕ್ಲಬ್ ನಡೆದು ಬಂದ ಹಾದಿ ಹಾಗೂ ಅದರ ಪ್ರಯೋಜನಗಳ ಬಗ್ಗೆ ಮಾಹಿತಿ ನೀಡಿದರು. ರೋಟರಿ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಕುಮಾರಸ್ವಾಮಿ, ಶ್ರೀನಿಧಿ ಎಜುಕೇಷನ್ ಸೊಸೈಟಿ ಕಾರ್ಯದರ್ಶಿ ಎ.ಪಿ.ಕೃಷ್ಣಪ್ಪ, ಮುಖ್ಯಶಿಕ್ಷಕ ಗುರುಮೂರ್ತಿಗೌಡ, ಕೆ.ಪಿ.ಕುಮಾರಸ್ವಾಮಿ, ಸಲ್ಮಾ, ಎಸ್.ಗಣೇಶ್ ಉಪಸ್ಥಿತರಿದ್ದರು.