ಕೊರೋನಾ ಲಸಿಕೆ ಸಮರ್ಪಕವಾಗಿ ನೀಡದ ಕೇಂದ್ರ ಬಿಜೆಪಿ ಸರ್ಕಾರ ಹಾಗೂ ಶಿವಮೊಗ್ಗ ನಗರದಲ್ಲಿ ದಿಡೀರ್ ಲಸಿಕೆ ಅಭಿಯಾನವನ್ನು ಸ್ಥಗಿತ ಗೊಳಿಸಿದ ಸರ್ಕಾರದ ನೀತಿಯನ್ನು ಖಂಡಿಸಿ – ಜಿಲ್ಲಾ ಯುವ ಕಾಂಗ್ರೆಸ್ ನಿಂದ ಪ್ರತಿಭಟನೆ ನಡೆಸಿದರು. ಕೇಂದ್ರ ಬಿಜೆಪಿ ಸರ್ಕಾರ ದೇಶಾದ್ಯಂತ ಎರಡು ಕೊರೊನಾ ಅಲೆಗಳನ್ನು ಸಮರ್ಪಕವಾಗಿ ನಿಭಾಯಿಸದೆ ಮತ್ತು ಲಸಿಕೆ ವಿಚಾರದಲ್ಲಿ ತಾರತಮ್ಯ ಮಾಡುತ್ತಿರುವುದು ಖಂಡಿಸಿ ಹಾಗೂ ಶಿವಮೊಗ್ಗ ನಗರದಲ್ಲಿ ದಿಡೀರ್ ಲಸಿಕಾ ಅಭಿಯಾನ ವನ್ನು ಸ್ಥಗಿತಗೊಳಿಸಿದ ಸರ್ಕಾರದ ನೀತಿಯನ್ನು ಖಂಡಿಸಿ ಇಂದು ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ನಗರದ ಕುವೆಂಪು ರಸ್ತೆಯ ಜಿಲ್ಲಾ ಆರೋಗ್ಯ ತರಬೇತಿ ಕೇಂದ್ರ ಲಸಿಕಾ ಕೇಂದ್ರದ ಮುಂದೆ ಪ್ರತಿಭಟನೆ ಮಾಡಿದರು.
ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯರಾದ ಆರ್ ಪ್ರಸನ್ನ ಕುಮಾರ್, ಮಹಾನಗರ ಪಾಲಿಕೆ ಸದಸ್ಯರಾದ ರೇಖಾ ರಂಗನಾಥ್, ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ. ಪ್ರವೀಣ್ ಕುಮಾರ್, ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ರಂಗನಾಥ್ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಪಿ. ಗಿರೀಶ್, ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಬಿ ಲೋಕೇಶ್, ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಎಸ್ ಕುಮಾರೇಶ್, ಪದಾಧಿಕಾರಿಗಳಾದ ಉಮೇಶ್ ಬಾಳೆಗುಂಡಿ, ಅರುಣ್ ನವುಲೆ, ವೆಂಕಟೇಶ್ ಕಲ್ಲೂರು, ರಾಹುಲ್ ಸೀಗೆಹಟ್ಟಿ, ಶ್ರೀನಿವಾಸ್, ಪವನ್, ರಾಕೇಶ್, ಇರ್ಫಾನ್, ಕ್ಲೇಮೆಂಟ್ ಉಪಸ್ಥಿತರಿದ್ದರು
ವರದಿ ಮಂಜುನಾಥಶೆಟ್ಟಿ ಶಿವಮೊಗ್ಗ
CCTV SALES & SERVICE
9880074684
ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153